ಜೂ.21: ಸೇವಾ ಭಾರತಿ ಹೆಲ್ಪ್ ಲೈನ್ ಟ್ರಸ್ಟ್ ವತಿಯಿಂದ ನೂತನ ಆಂಬ್ಯುಲೆನ್ಸ್ ಲೋಕಾರ್ಪಣೆ

0

ಸುಳ್ಯ ಸೇವಾಭಾರತಿ ಹೆಲ್ಪ್ ಲೈನ್ ಟ್ರಸ್ಟ್ ಇದರ ವತಿಯಿಂದ ನೂತನ ಆಂಬ್ಯುಲೆನ್ಸ್ ಲೋಕಾರ್ಪಣೆಯು
ಜೂ.21 ರಂದು ಕೇರ್ಪಳ ದುರ್ಗಾಪರಮೇಶ್ವರಿ ಕಲಾ ಮಂದಿರದಲ್ಲಿ ನಡೆಯಲಿರುವುದು.


ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕಿ ಕು.ಭಾಗೀರಥಿ ಮುರುಳ್ಯ ರವರು ಆಂಬ್ಯುಲೆನ್ಸ್ ನ್ನು ಲೋಕಾರ್ಪಣೆ ಮಾಡಲಿದ್ದಾರೆ. ಮಂಗಳೂರು ಸೇವಾ ಭಾರತಿ ವಿಭಾಗ ಪ್ರಮುಖ್ ಡಾ.ನಾರಾಯಣ ಶೆಣೈ ಯವರು ವಿಷಯ ಮಂಡಿಸಲಿರುವರು.

ಮುಖ್ಯ ಅಭ್ಯಾಗತರಾಗಿ ಮಾಜಿ ಸಚಿವ ಎಸ್‌.ಅಂಗಾರ,ಸುಳ್ಯ ತಾಲೂಕು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಕರುಣಾಕರ ಕೆ.ವಿ ಉಪಸ್ಥಿತರಿರುವರು. ಅತಿಥಿಗಳಾಗಿ ಪುಟ್ಟಪ್ಪ ಜೋಶಿ ಮೆಮೋರಿಯಲ್ ಟ್ರಸ್ಟ್ ಅಧ್ಯಕ್ಷ ಸುಧಾಕರ ಕಾಮತ್, ಭಾಲಾವಲಿಕಾರ್ ರಾಜಾಪುರ ಸಾರಸ್ವತ ಸಮಾಜದ ಅಧ್ಯಕ್ಷ ಹೇಮಂತ್ ಕುಮಾರ್ ಕಂದಡ್ಕ ಭಾಗವಹಿಸಲಿರುವರು.