ರೌಡಿ ಶೀಟರ್ ಪಟ್ಟಿಯಲ್ಲಿರುವವರ ಮನೆ ಹಾಗೂ ವ್ಯಾಪಾರ ಕೇಂದ್ರಗಳ ಮೇಲೆ ದಿಢೀರ್ ದಾಳಿ ನಡೆಸಿದ ಪೊಲೀಸರು

0

ರಾಜ್ಯಾದ್ಯಂತ ಪೊಲೀಸ್ ಇಲಾಖೆ ನಡೆಸಿದ ಕಾರ್ಯಾಚರಣೆಯ ಭಾಗವಾಗಿ ಸುಳ್ಯ ತಾಲೂಕು ವ್ಯಾಪ್ತಿಯ ಮೂರು ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲೂ ಭಾನುವಾರ ರಾತ್ರಿ ಸುಮಾರು 11 ಗಂಟೆ ಸಮಯಕ್ಕೆ ಪೊಲೀಸರು ದಿಡೀರ್ ದಾಳಿ ನಡೆಸಿ ತಪಾಸಣೆ ಮತ್ತು ಮಾಹಿತಿ ಕಲೆ ಹಾಕಿರುವ ಘಟನೆ ನಡೆದಿದೆ.

ಈ ದಾಳಿಯಲ್ಲಿ ಸುಳ್ಯ ತಾಲೂಕು ವ್ಯಾಪ್ತಿಯ ಸುಮಾರು 30ಕ್ಕೂ ಹೆಚ್ಚು ರೌಡಿಶೀಟರ್ ಗಳನ್ನು ತಪಾಸಣೆ ಮಾಡಿದ್ದಾರೆ .ಈ ಸಂದರ್ಭದಲ್ಲಿ ಅವರು ತಮ್ಮ ತಮ್ಮ ಮನೆಗಳಲ್ಲಿ ಯಾವುದಾದರೂ ಆಯುಧ ಸಾಮಗ್ರಿಗಳನ್ನು ಹೊಂದಿರುತ್ತಾರೆಯೇ ಎಂಬ ಬಗ್ಗೆ ತಪಾಸಣೆಗಳು ಕೂಡ ನಡೆದಿದೆ ಎಂದು ತಿಳಿದು ಬಂದಿದೆ.ಈ ಪ್ರಕ್ರಿಯೆ ರಾಜ್ಯದಾದ್ಯಂತ ಪೊಲೀಸ್ ಇಲಾಖೆ ವತಿಯಿಂದ ನಡೆಯುತ್ತಿದ್ದು ಇದರ ಅಂಗವಾಗಿ ಸುಳ್ಯ ತಾಲೂಕು ವ್ಯಾಪ್ತಿಯ ಸುಳ್ಯ,ಬೆಳ್ಳಾರೆ, ಸುಬ್ರಹ್ಮಣ್ಯ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ನಡೆದಿದೆ.

ದಾಳಿ ನಡೆಸಿರುವ ಪೊಲೀಸರು ರೌಡಿಶೀಟರ್ ಪಟ್ಟಿಯಲ್ಲಿರುವ ವ್ಯಕ್ತಿಗಳ ಮನೆಗಳಿಗೂ ಮತ್ತು ಅವರ ವ್ಯಾಪಾರ ಕೇಂದ್ರಗಳಿಗೂ ದಾಳಿ ನಡೆಸಿ ತಪಾಸಣೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.