ಕೆ.ವಿ.ಜಿ ಡೆಂಟಲ್ ಕಾಲೇಜಿನಲ್ಲಿ ರಕ್ತದಾನ ಶಿಬಿರ

0

ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜು, ಕೆ.ವಿ.ಜಿ ಡೆಂಟಲ್ ಕಾಲೇಜು ಮತ್ತು ಅಸ್ಪತ್ರೆ, ಕೆ.ವಿ.ಜಿ. ಪಾಲಿಟೆಕ್ನಿಕ್, ಕೆ.ವಿ.ಜಿ. ಐಟಿಐ ಮತ್ತು ಇಂಡಿಯನ್ ರೆಡ್ ಕ್ರಾಸ್‌ ಸೊಸೈಟಿ ಸುಳ್ಯ ಯುನಿಟ್ ಇವುಗಳ ಜಂಟಿ ಆಶ್ರಯದಲ್ಲಿ ರಕ್ತದಾನ ಶಿಬಿರ ಇಂದು ಕೆ.ವಿ.ಜಿ. ಡೆಂಟಲ್ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.


ಕೆ.ವಿ.ಜಿ. ಚಾರಿಟೇಬಲ್ ಟ್ರಸ್ಟ್‌ನ ವ್ಯವಸ್ಥಾಪಕ ನಿರ್ದೇಶಕ ಮತ್ತು ರಾಜ್ಯ ಒಕ್ಕಲಿಗ ಸಂಘದ ಅಧ್ಯಕ್ಷ ಡಾ. ರೇಣುಕಾಪ್ರಸಾದ್ ಕೆ.ವಿ. ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು.

ಇಂಡಿಯನ್ ರೆಡ್ ಕ್ರಾಸ್ ಸಂಸ್ಥೆಯ ಸುಳ್ಯ ಘಟಕದ ಅಧ್ಯಕ್ಷ ಪಿ.ಬಿ. ಸುಧಾಕರ ರೈ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.

ಕೆ.ವಿ.ಜಿ. ಡೆಂಟಲ್ ಕಾಲೇಜಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಉಜ್ವಲ್ ಯು.ಜೆ, ಕೆ.ವಿ.ಜಿ. ಐಟಿಐ ಪ್ರಾಂಶುಪಾಲರಾದ ಚಿದಾನಂದ ಗೌಡ ಬಾಳಿಲ, ರೆಡ್ ಕ್ರಾಸ್ ಸಂಸ್ಥೆಯ ಕಾರ್ಯದರ್ಶಿ ತಿಪ್ಪೇಶ್, ರೆಡ್ ಕ್ರಾಸ್‌ ಸಂಸ್ಥೆಯ ಉಪಾಧ್ಯಕ್ಷ ಕೆ.ಎಂ. ಮುಸ್ತಫಾ, ಕೆ.ವಿ‌.ಜಿ. ಪಾಲಿಟೆಕ್ನಿಕ್ ಪ್ರಾಂಶುಪಾಲರಾದ ಜಯಪ್ರಕಾಶ್ ಕಲ್ಲುಗದ್ದೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕೆ.ವಿ.ಜಿ. ಡೆಂಟಲ್ ಕಾಲೇಜಿನ ಪ್ರಾಂಶುಪಾಲೆ ಡಾ. ಮೋಕ್ಷ ನಾಯಕ್ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿ ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಸುರೇಶ್ ವಂದಿಸಿದರು. ಡಾ. ಗಾಯತ್ರಿ ಡೊಂಗೇಲಿ ಕಾರ್ಯಕ್ರಮ ನಿರೂಪಿಸಿದರು. ಡಾ. ಅಂಜಲಿ, ಡಾ. ಅನುಗ್ರಹ ಪ್ರಾರ್ಥಿಸಿದರು. ಕಾರ್ಯಕ್ರಮದಲ್ಲಿ ಕೆ.ವಿ.ಜಿ. ಸಮೂಹ ಸಂಸ್ಥೆಗಳ ಮುಖ್ಯಸ್ಥರು, ಸಿಬ್ಬಂದಿಗಳು, ವಿದ್ಯಾರ್ಥಿಗಳು ಭಾಗವಹಿಸಿದ್ದರು.