ವಿನೋಬನಗರ : ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ನೂತನ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

0

ಶಾಸಕಿ ಭಾಗೀರಥಿ ಮುರುಳ್ಯ ಉಪಸ್ಥಿತಿ


ಜಾಲ್ಸೂರು ಗ್ರಾಮದ ವಿನೋಬನಗರದ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ 2023 -24 ನೇ ಸಾಲಿಗೆ ನೂತನವಾಗಿ ಸೇರ್ಪಡೆಗೊಂಡ ಶಾಲಾ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮವು ಜೂ.14ರಂದು ಬೆಳಿಗ್ಗೆ ನಡೆಯಿತು.


ಶಾಲೆಗೆ ನೂತನವಾಗಿ ಸೇರ್ಪಡೆಗೊಂಡ ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗೆ ಆರತಿ ಬೆಳಗಿ ಕುಂಕುಮ ಧಾರಣೆ ಮಾಡಿ ಭಾರತಮಾತೆ ಮತ್ತು ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ವಂದನೆ ಸಲ್ಲಿಸಲಾಯಿತು.


ಬಳಿಕ ನಡೆದ ಕಾರ್ಯಕ್ರಮವನ್ನು ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅವರು ಉದ್ಘಾಟಿಸಿ , ಶುಭಹಾರೈಸಿದರು.

ವಿದ್ಯಾಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷ ಶ್ಯಾಮ್ ಪ್ರಸಾದ ಅಡ್ಡಂತಡ್ಕ ಅವರು ಅಧ್ಯಕ್ಷತೆ ವಹಿಸಿದ್ದರು. ವಿದ್ಯಾ ಸಂಸ್ಥೆಯ ಸಂಚಾಲಕರಾದ ಸುಧಾಕರ ಕಾಮತ್, ಗೌರವ ಸಲಹೆಗಾರರಾದ ನ. ಸೀತಾರಾಮ ,ಆಡಳಿತ ಅಧಿಕಾರಿ ಗೋಪಾಲ್ ರಾವ್, ಆಡಳಿತ ಮಂಡಳಿ ಸದಸ್ಯರಾದ ಡಾ. ಗೋಪಾಲಕೃಷ್ಣ ಭಟ್ ಕಾಟೂರು ,ಹೇಮಂತ್ ಕಾಮತ್ ,ಎಸ್. ಡಿ. ಎಂ. ಸಿ. ಉಪಾಧ್ಯಕ್ಷ ರವಿರಾಜ್ ಗಬ್ಬಲಡ್ಕ, ಅಡ್ಕಾರು ಶ್ರೀ ಸುಬ್ರಹ್ಮಣ್ಯ ಕ್ಷೇತ್ರದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಜಯರಾಮ ರೈ ಜಾಲ್ಸೂರು, ದೇವಸ್ಥಾನದ ಮೊಕ್ತೇಸರ ಗುರುರಾಜ್ ಭಟ್ ಅಡ್ಕಾರು ಸೇರಿದಂತೆ ವಿದ್ಯಾರ್ಥಿಗಳ ಪೋಷಕ ವೃಂದದವರು ಉಪಸ್ಥಿತರಿದ್ದರು.


ಪ್ರಾಥಮಿಕ ಶಾಲಾ ವಿಭಾಗದ ಮುಖ್ಯೋಪಾಧ್ಯಾಯ ಜಯಪ್ರಸಾದ್ ಕಾರಿಂಜ ಸ್ವಾಗತಿಸಿ, ಪ್ರೌಢಶಾಲಾ ವಿಭಾಗದ ಮುಖ್ಯೋಪಾಧ್ಯಾಯ ಗಿರೀಶ್ ಕುಮಾರ್ ಅವರು ವಂದಿಸಿದರು .
ಶ್ರೀಮತಿ ದಿವ್ಯ ಬಿ. ಮತ್ತು ಶಶಿಧರ ಎಂ. ಕಾರ್ಯಕ್ರಮ ನಿರೂಪಿಸಿದರು.