ಪೆರುವಾಜೆ ಶಾಲೆಗೆ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ

0

ಪೆರುವಾಜೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಶಾಸಕಿ ಭಾಗೀರಥಿ ಮುರುಳ್ಯ ಜೂ.16 ರಂದು ಭೇಟಿ ನೀಡಿದರು. ಶಾಲಾ ಮಕ್ಕಳೊಂದಿಗೆ ಮಾತುಕತೆ ನಡೆಸಿದರು ಮತ್ತು ಶಾಲಾ ಅಧ್ಯಾಪಕರೊಂದಿಗೆ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚಿಸಿದರು.


ಬಳಿಕ ಶಾಲಾ ಆವರಣದಲ್ಲಿ ಕುಸಿದ ತಡೆಗೋಡೆಯನ್ನು ವೀಕ್ಷಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ,ಕಾರ್ಯದರ್ಶಿ ರಾಕೇಶ್ ರೈ ಕೆಡೆಂಜಿ,ಪೆರುವಾಜೆ ಗ್ರಾಮ ಪಂಚಾಯತ್ ಸದಸ್ಯ ಪದ್ಮನಾಭ ಶೆಟ್ಟಿ,ಪಿಡಿಒ ಜಯಪ್ರಕಾಶ್ ಅಲೆಕ್ಕಾಡಿ,ಶಾಲಾ ಮುಖ್ಯೋಪಾಧ್ಯಾಯ ತೇಜಪ್ಪ, ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.