ಬೆಳ್ಳಾರೆ ಸುಬ್ರಹ್ಮಣ್ಯ ಜೋಶಿಯವರ ಪುತ್ರ ಶರತ್ ಜೋಶಿ ನಿಧನ

0


ಬೆಳ್ಳಾರೆಯ ಉದ್ಯಮಿ, ಪ್ರಸಾದ್ ಹಾರ್ಡ್ ವೇರ್ಸ್ ನ ಮಾಲಕ ಸುಬ್ರಹ್ಮಣ್ಯ ಜೋಶಿಯವರ ಪುತ್ರ ನಿನ್ನೆ ರಾತ್ರಿ ನಿಧನರಾದರು. ಇವರಿಗೆ 21 ವರ್ಷ ವಯಸ್ಸಾಗಿತ್ತು. ಮೃತರು ಮಂಗಳೂರಿನ ಶ್ರೀನಿವಾಸ ಕಾಲೇಜಿನಲ್ಲಿ ಎಂ.ಬಿ.ಎ ವ್ಯಾಸಂಗ ಮಾಡುತ್ತಿದ್ದು, ನಿನ್ನೆ ಪರೀಕ್ಷೆ ಬರೆದು ಮನೆಗೆ ಬಂದಿದ್ದರು.

ರಾತ್ರಿ ತೀವ್ರ ಅಸೌಖ್ಯಗೊಂಡು ನಿಧನರಾಗಿರುವುದಾಗಿ ತಿಳಿದುಬಂದಿದೆ. ಮೃತರು ತಂದೆ, ತಾಯಿ ಶ್ಯಾಮಲ ಎಸ್. ಜೋಶಿ, ಸಹೋದರಿ ಡಾ. ಶರಣ್ಯ ಅಖಿಲೇಶ್ ಸೇರಿದಂತೆ ಕುಟುಂಬಸ್ಥರು, ಬಂಧು ಮಿತ್ರರನ್ನು ಅಗಲಿದ್ದಾರೆ.