ಸುಬ್ರಹ್ಮಣ್ಯ, ಬಳ್ಪ, ಎಡಮಂಗಲ ಗ್ರಾ.ಪಂ. ಅಧ್ಯಕ್ಷ, ಉಪಾಧ್ಯಕ್ಷರ ಮೀಸಲಾತಿ ಪ್ರಕಟ

0

ಕಡಬ ತಾಲೂಕಿನ ಗ್ರಾಮ ಪಂಚಾಯತ್‌ಗಳ ಮುಂದಿನ ಎರಡೂವರೆ ವರ್ಷಗಳ ಅಧ್ಯಕ್ಷತೆ, ಉಪಾಧ್ಯಕ್ಷತೆಗೆ ಮೀಸಲಾತಿ ನಿಗದಿ ಕಾರ್ಯ ಇಂದು ಸುಳ್ಯ ತಾಲೂಕು ಪಂಚಾಯತ್‌ನಲ್ಲಿ ನಡೆದಿದ್ದು, ಅಧ್ಯಕ್ಷತೆ-ಉಪಾಧ್ಯಕ್ಷತೆಗೆ ಮೀಸಲಾತಿ ನಿಗದಿ ಪೂರ್ಣಗೊಂಡಿದೆ.

ಕಡಬ ತಾಲೂಕಿನ ಸುಬ್ರಹ್ಮಣ್ಯ ಗ್ರಾ.ಪಂ.ನ ಅಧ್ಯಕ್ಷತೆ ಹಿಂದುಳಿದ ವರ್ಗ ಎ ಮಹಿಳೆ, ಉಪಾಧ್ಯಕ್ಷತೆ ಸಾಮಾನ್ಯ, ಬಳ್ಪ ಗ್ರಾ.ಪಂ., ಅಧ್ಯಕ್ಷತೆ ಸಾಮಾನ್ಯ, ಉಪಾಧ್ಯಕ್ಷತೆ ಸಾಮಾನ್ಯ ಮಹಿಳೆ, ಎಡಮಂಗಲ ಗ್ರಾ.ಪಂ.ನ ಅಧ್ಯಕ್ಷತೆ ಸಾಮಾನ್ಯ, ಉಪಾಧ್ಯಕ್ಷತೆ ಸಾಮಾನ್ಯ ಮಹಿಳೆ ಸ್ಥಾನಕ್ಕೆ ಮೀಸಲಾಗಿದೆ.