ಸುಳ್ಯ ರೋಟರಿ ಶಾಲೆಯಲ್ಲಿ ವಿದ್ಯಾರ್ಥಿ ಸರಕಾರ ರಚನೆ

0


ರೋಟರಿ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆ, ಸುಳ್ಯ ಇದರ ವಿದ್ಯಾರ್ಥಿ ಸರಕಾರದ ಚುನಾವಣೆ ಜೂ. ೧೭ರಂದು ನಡೆಯಿತು. ಶಾಲಾ ವಿದ್ಯಾರ್ಥಿ ನಾಯಕನಾಗಿ ೬ ನೇ ತರಗತಿಯ ಶ್ರೀಜಿತ್ ಡಿ. ಟಿ. ಆಯ್ಕೆ ಯಾಗಿದ್ದಾರೆ. ಶಾಲಾ ವಿದ್ಯಾರ್ಥಿ ಉಪನಾಯಕಿಯಾಗಿ ೫ ನೇ ತರಗತಿಯ ಮಿಥಾಲಿ ಕೊಯ್ನಾಡು ಆಯ್ಕೆಯಾಗಿದ್ದಾರೆ. ಮುಖ್ಯ ಶಿಕ್ಷಕಿ ಶ್ರೀಮತಿ ಹರಿಣಾಕ್ಷಿ ಕೆ. ಎಸ್. ವಿದ್ಯಾರ್ಥಿ ಸರ್ಕಾರದ ಚುನಾವಣೆಯ ವ್ಯವಸ್ಥೆ ಮಾಡಿದರು. ದೈಹಿಕ ಶಿಕ್ಷಣ ಶಿಕ್ಷಕಿ ಶ್ರೀಮತಿ ಗೀತಾ ಎನ್ ರವರ ಉಸ್ತುವಾರಿಯಲ್ಲಿ ಕಾರ್ಯಕ್ರಮ ನಡೆಯಿತು. ಶಾಲಾ ಶಿಕ್ಷಕ – ಶಿಕ್ಷಕೇತರ ಸಿಬ್ಬಂದಿಗಳು ಮತ್ತು ಸ್ಕೌಟ್ ಮತ್ತು ಗೈಡ್ ವಿದ್ಯಾರ್ಥಿಗಳು ಸಹಕರಿಸಿದರು.