ಕಂದ್ರಪ್ಪಾಡಿ:ವಿಶ್ವ ತಂಬಾಕು ವಿರೋಧಿ ದಿನಾಚರಣೆ

0

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ), ಜನಜಾಗೃತಿ ವೇದಿಕೆ ಗುತ್ತಿಗಾರು ವಲಯ, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಕಂದ್ರಪ್ಪಾಡಿ ಇವುಗಳ ಸಂಯುಕ್ತ ಆಶ್ರಯದಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ ಕಾರ್ಯಕ್ರಮವನ್ನು
ಜೂ.18 ರಂದು ನಡೆಸಲಾಯಿತು.


ಕಾರ್ಯಕ್ರಮವನ್ನು ಜನಜಾಗೃತಿ ವಲಯಾಧ್ಯಕ್ಷರಾದ ಮಿತ್ರದೇವ ಮಡಪ್ಪಾಡಿರವರು ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾದ ಜನ ಜಾಗೃತಿ ಮಾಜಿ ವಲಯ ಅಧ್ಯಕ್ಷರಾದ ಲೋಕೇಶ್ ಪೀರನಮನೆರವರು ತಂಬಾಕು ಸೇವನೆಯಿಂದ ಮಾನವನ ಅರೋಗ್ಯದಲ್ಲಿ ಆಗುವ ತೊಂದರೆಗಳ ಬಗ್ಗೆ ಮಾಹಿತಿಯನ್ನು ನೀಡಿದರು. ಮಕ್ಕಳು, ದೊಡ್ಡವರು ತಂಬಾಕು ಮಿಶ್ರಿತ ವಸ್ತುಗಳನ್ನು ಸೇವನೆ ಮಾಡಬಾರದು, ಇದರಿಂದ ಅರೋಗ್ಯ ಕೆಡುವುದು ಅಲ್ಲದೆ ಮನುಷ್ಯನ ಆಯುಷ್ಯವು ಕಡಿಮೆ ಆಗುತ್ತದೆ ಎಂದು ಹೇಳಿದರು.


ಈ ಸಂದರ್ಭದಲ್ಲಿ ದೇವಚಳ್ಳ ಜನ ಜಾಗೃತಿ ಗ್ರಾಮ ಸಮಿತಿಯ ಅಧ್ಯಕ್ಷರಾದ ವೇಣುಕುಮಾರ್ ಚಿತ್ತಡ್ಕ, ಒಕ್ಕೂಟದ ಅಧ್ಯಕ್ಷರಾದ ಪ್ರದೀಪ್ ಕುಮಾರ್, ವಲಯ ಮೇಲ್ವಿಚಾರಕರಾದ ಬಾಲಕೃಷ್ಣ ಗೌಡ, ಒಕ್ಕೂಟದ ಪದಾಧಿಕಾರಿಗಳು ಉಪಸ್ಥಿತರಿದ್ದರು. ಈ ಕಾರ್ಯಕ್ರಮದಲ್ಲಿ ಕಂದ್ರಪ್ಪಾಡಿ ಒಕ್ಕೂಟದ ಎಲ್ಲಾ ಸದಸ್ಯರು ಭಾಗವಹಿಸಿದರು.
ಕಾರ್ಯಕ್ರಮವನ್ನು ಕಂದ್ರಪ್ಪಾಡಿ ಕಾರ್ಯಕ್ಷೇತ್ರದ ಸೇವಾಪ್ರತಿನಿಧಿಯವರಾದ ತಿಮ್ಮಪ್ಪ ಕಡ್ಯಾ ರವರು ನಿರೂಪಿಸಿದರು.