
ಶ್ರೀ ಶಾರದಾಂಬಾ ಭಜನಾ ಮಂಡಳಿ ಪಂಜ ಮಹಾಸಭೆಯು ಜೂ.19ರಂದು ಪಂಜ ಶ್ರೀ ಶಾರದಾಂಬಾ ಭಜನಾ ಮಂದಿರದಲ್ಲಿ ಭಜನಾ ಮಂಡಳಿಯ ಅಧ್ಯಕ್ಷ ಬಾಲಕೃಷ್ಣ ಪುತ್ಯ ರವರ ಸಭಾಧ್ಯಕ್ಷತೆ ಯಲ್ಲಿ ನಡೆಯಿತು.

ವೇದಿಕೆಯಲ್ಲಿ ಭಜನಾ ಮಂಡಳಿಯ ಉಪಾಧ್ಯಕ್ಷ ಪರಮೇಶ್ವರ ಗೌಡ ಬಿಳಿಮಲೆ, ಶಾರದಾಂಬಾ ಯಕ್ಷಗಾನ ಕಲಾ ಸೇವಾ ಟ್ರಸ್ಟ್ ನ ಉಪಾಧ್ಯಕ್ಷ ತಿಮ್ಮಪ್ಪ ಗೌಡ ಕೂತ್ಕುಂಜ, ಭಜನಾ ಮಂಡಳಿಯ ಕಾರ್ಯದರ್ಶಿ ಗುರುಪ್ರಸಾದ್ ತೋಟ, ಕೋಶಾಧಿಕಾರಿ ಲೋಕೇಶ್ ಬರೆಮೇಲು ವೇದಿಕೆಯಲ್ಲಿ ಉಪಸ್ಥಿತರಿದ್ದರು.















ಸಭೆಯಲ್ಲಿ ನೂತನ ಸದಸ್ಯರ ಸೇರ್ಪಡೆ , ಪದಾಧಿಕಾರಿಗಳ ಆಯ್ಕೆ, ವಿವಿಧ ಸಮಿತಿಗಳ ರಚನೆ, ವರದಿ ವಾಚನ ನಡೆಯಿತು. ಕಾರ್ಯಕ್ರಮದಲ್ಲಿ ಬಾಲಕೃಷ್ಣ ಪುತ್ಯ ಸ್ವಾಗತಿಸಿದರು.ಗುರುಪ್ರಸಾದ್ ತೋಟ ನಿರೂಪಿಸಿದರು.ಲೋಕೇಶ್ ಬರೆಮೇಲು ವಂದಿಸಿದರು.









