ಸುಳ್ಯ ಎನ್ನೆoಪಿಯುಸಿಯಲ್ಲಿ ವಿಶ್ವ ಯೋಗ ದಿನಾಚರಣೆ

0


ಯೋಗ ಶ್ರೇಷ್ಠ ವಿದ್ಯೆಯಾಗಿದ್ದು ನಿರಂತರ ಅಭ್ಯಾಸ,ಕ್ರಮಬದ್ಧ ಪಾಲನೆ ಮಾಡುವುದರ ಮೂಲಕ ಮನಸ್ಸನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು. ಯೋಗ ನಮ್ಮ ಜೀವನದ ಭಾಗವಾಗಬೇಕು.ಆ ಮೂಲಕ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಲು ಸಾಧ್ಯ ಎಂದು ಸುಳ್ಯ ಕೆವಿಜಿ ಆಯುರ್ವೇದ ಆಸ್ಪತ್ರೆ ಮತ್ತು ಮಹಾವಿದ್ಯಾಲಯದ ಅಗಥ ತಂತ್ರ ವಿಭಾಗದ ಪ್ರಾಧ್ಯಾಪಕ ಡಾ. ಅವಿನಾಶ್ ಅವರು ಹೇಳಿದರು. ಸುಳ್ಯ ನೆಹರು ಮೆಮೋರಿಯಲ್ ಪಪೂ ಕಾಲೇಜಿನಲ್ಲಿ ನಡೆದ ಯೋಗ ದಿನಾಚರಣೆಯ ಮುಖ್ಯ ಅತಿಥಿಯಾಗಿ ಅವರು ಮಾತನಾಡುತ್ತಿದ್ದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾoಶುಪಾಲರಾದ
ಹರಿಣಿ ಪುತ್ತೂರಾಯ ಅವರು ಮಾತನಾಡಿ ನಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯವನ್ನು ಕಾಪಾಡಿಕೊಂಡು ಬದುಕನ್ನು ಆನಂದದಾಯಕವಾಗಿಸಲು ಸಂಸ್ಕೃತಿಯ ಪ್ರತಿಬಿಂಬವಾಗಿರುವ ಯೋಗವನ್ನು ಅಭ್ಯಾಸ ಮಾಡಬೇಕು.ಮುಂದಿನ ಜನಾಂಗಕ್ಕೆ ನಾವೆಲ್ಲರೂ ಯೋಗವನ್ನು ಮುಂದುವರಿಸಿಕೊಂಡು ಹೋಗಬೇಕಾದುದು ಅವಶ್ಯಕ ಎಂದು ಅವರು ಹೇಳಿದರು.ವೇದಿಕೆಯಲ್ಲಿ ವಿದ್ಯಾರ್ಥಿ ಕ್ಷೇಮಾಧಿಕಾರಿಗಳಾದ ರೇಷ್ಮಾ ಎಂ ಎಂ, ಹರೀಶ ಸಿ ಉಪಸ್ಥಿತರಿದ್ದರು.

ಸಭಾ ಕಾರ್ಯಕ್ರಮದ ಬಳಿಕ ಸುಳ್ಯ ಕೆವಿಜಿ ಆಯುರ್ವೇದ ಮಹಾ ವಿದ್ಯಾಲಯ ಮತ್ತು ಆಸ್ಪತ್ರೆಯ ಡಾ. ನಿಶಾ, ಡಾ. ವಿಜಯಲಕ್ಷ್ಮೀ ಡಾ. ನಯನ,ಡಾ.ಸಾಗರ್,ಡಾ.ಕಿಶೋರ್ ಯೋಗ ಪ್ರಾತ್ಯಕ್ಷಿಕೆ ನಡೆಸಿಕೊಟ್ಟರು.
ಉಪನ್ಯಾಸಕ ವಿನಯ ನಿಡ್ಯಮಲೆ ಕಾರ್ಯಕ್ರಮ ನಿರೂಪಿಸಿದರು.