ಜೂ.24 : ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಗ್ರಾಜ್ಯುವೇಶನ್ ಡೇ

0

ಜೂ.24 ರಂದು ಕೆ.ವಿ.ಜಿ. ತಾಂತ್ರಿಕ ಮಹಾವಿದ್ಯಾಲಯದಲ್ಲಿ ೨೦೨೨-೨೩ನೇ ಸಾಲಿನಲ್ಲಿ ಅಂತಿಮ ವರ್ಷದ ಪದವಿ ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ ಪದವಿ ಪ್ರಮಾಣ ಪತ್ರ ಪ್ರದಾನ ಕಾರ್ಯಕ್ರಮ ನಡೆಯಲಿದೆ.


ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ವಿಶ್ವೇಶ್ವರಾಯ ತಾಂತ್ರಿಕ ಮಹಾವಿದ್ಯಾಲಯದ ಉಪಕುಲಪತಿ ಡಾ. ವಿದ್ಯಾಶಂಕರ್ ಎಸ್., ವಿಶ್ವೇಶ್ವರಾಯ ತಾಂತ್ರಿಕ ಮಹಾವಿದ್ಯಾಲಯದ ರಿಜಿಸ್ಟ್ರಾರ್ ಡಾ. ಬಿ.ಇ. ರಂಗಸ್ವಾಮಿ ಅವರು ಆಗಮಿಸಲಿದ್ದು, ಥೋಮಸ್ ಜಾನ್, ಕಾಲೇಜಿನ ಹಳೆವಿದ್ಯಾರ್ಥಿ ಮತ್ತು ಮ್ಯಾನೇಜಿಂಗ್ ಡೈರೆಕ್ಟರ್ Agappe Diognostic Ltd. Kanayannur, Kerala ಇವರು ಆಗಮಿಸಲಿದ್ದಾರೆ.

ಈ ಸಮಾರಂಭದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿದ ಸುಮಾರು 300 ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ ಎಂದು ಕಾಲೇಜಿನ ಪತ್ರಿಕಾ ಪ್ರಕಟಣೆಯಲ್ಲಿ ಕೆ.ವಿ.ಜಿ. ಕಾಲೇಜ್ ಆಫ್ ಇಂಜಿನಿಯರಿಂಗ್ ಸುಳ್ಯ ಇದರ ಗವರ್ನಿಂಗ್ ಕೌನ್ಸಿಲ್ ಅಧ್ಯಕ್ಷರಾದ ಡಾ. ರೇಣುಕಾಪ್ರಸಾದ್ ಕೆ. ವಿ., ಕಾಲೇಜಿನ ಸಿ.ಇ.ಒ., ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಡಾ. ಉಜ್ವಲ್ ಯು.ಜೆ., ಪ್ರಾಂಶುಪಾಲ ಡಾ. ಸುರೇಶ ವಿ., ಉಪಪ್ರಾಂಶುಪಾಲ ಡಾ. ಶ್ರೀಧರ್ ಕೆ. ಇವರ ಉಪಸ್ಥಿತಿಯಲ್ಲಿ ತಿಳಿಸಿರುತ್ತಾರೆ.