ಖ್ಯಾತ ಕ್ರಿಕೆಟ್‌ ತಾರೆ ಕೆ.ಎಲ್. ರಾಹುಲ್ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ

0

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಜೂ.25 ರಂದು ಖ್ಯಾತ ಕ್ರಿಕೆಟ್ ತಾರೆ, ಟೀಂ ಇಂಡಿಯಾದ ಆಟಗಾರ ಕೆ.ಎಲ್.ರಾಹುಲ್ ಭೇಟಿ ನೀಡಿದರು.

ಶ್ರೀ ದೇವಳಕ್ಕೆ ಆಗಮಿಸಿದ ಅವರು ಶ್ರೀ ದೇವರ ದರುಶನ ಪಡೆದು ಪ್ರಸಾದ ಸ್ವೀಕರಿಸಿದರು.

ಶ್ರೀ ದೇವಳದ ಅರ್ಚಕರು ಅವರು ಶಾಲು ಹೊದಿಸಿ ಮಹಾಪ್ರಸಾದ ನೀಡಿ ಹರಸಿದರು. ಬಳಿಕ ಅವರು ಹೊಸಳಿಗಮ್ಮನ ದರುಶನ ಪಡೆದರು.


ಕ್ಷೇತ್ರಕ್ಕೆ ಆಗಮಿಸಿದ ಅವರನ್ನು ಶಿಷ್ಟಾಚಾರ ವಿಭಾಗದ ಪ್ರಮೋದ್ ಕುಮಾರ್ ಎಸ್ ಸ್ವಾಗತಿಸಿದರು. ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಅಧ್ಯಕ್ಷ ಮೋಹನ್ ರಾಮ್ ಸುಳ್ಳಿ ಅವರನ್ನು ಆಡಳಿತ ಕಛೇರಿಯಲ್ಲಿ ಭೇಟಿಯಾದರು.