ಬಾಲಕಿಯ ಅತ್ಯಾಚಾರ ಪ್ರಕರಣ: ಮತ್ತೆ ಇಬ್ಬರ ಬಂಧನ – ಪೋಕ್ಸೋ ಪ್ರಕರಣ ದಾಖಲು

0

ಬಾಲಕಿಯ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಪೊಲೀಸರ ಬಂಧಿಸಿ ಪೋಕ್ಸೋ ಪ್ರಕರಣ ದಾಖಲಿಸಿದ ಘಟನೆಗೆ ಸಂಬಂಧಿಸಿ ಮತ್ತೊಂದು ಬೆಳವಣಿಗೆ ಸಂಭವಿಸಿದ್ದು ಬಾಲಕಿಯ ಹೇಳಿಕೆಯ ಮೇರೆಗೆ ಇನ್ನಿಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.

ಅಪ್ರಾಪ್ತ ಬಾಲಕಿಯ ಅತ್ಯಾಚಾರವೆಸಗಿದ ಆರೋಪದಲ್ಲಿ ಚಿದಾನಂದ ಎಂಬಾತನನ್ನು ಬೆಳ್ಳಾರೆ ಪೊಲೀಸರು ಜೂ.22 ರಂದು ಬಂಧಿಸಿದ್ದರು.

ಬಾಲಕಿಯಿಂದ ಹೇಳಿಕೆ ಪಡೆಯುತ್ತಿರುವ ಸಂದರ್ಭ ಆಕೆ ಬೇರೆ ಬೇರೆ ಸಮಯದಲ್ಲಿ ಇನ್ನಿಬ್ಬರು ಅತ್ಯಾಚಾರ ಎಸಗಿದ್ದಾರೆ ಎಂದು ಹೇಳಿದ ಹಿನ್ನೆಲೆಯಲ್ಲಿ
ಇಂದು ಆ ಆರೋಪಿಗಳಾದ ಕೊಡಿಯಾಲದ ಚೇತನ್ ಕಾಯರ್ತಡ್ಕ, ದರ್ಶನ್ ಕಾಯರ್ತಡ್ಕ ಎಂಬವರನ್ನು ಬೆಳ್ಳಾರೆ ಪೊಲೀಸರು ಬಂಧಿಸಿದ್ದು ಫೋಕ್ಸೋ ಪ್ರಕರಣದ ದಾಖಲಿಸಿದ್ದಾರೆ
.