
ಸಂಪಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲೆಯ ಕೃಷಿ ಇಲಾಖೆಯ ಉಪ ನಿರ್ದೇಶಕರಾದ ಶಿವಶಂಕರ ಯು.ಬಿ. ರವರು ಭೇಟಿ ನೀಡಿ ಸಂಘದ ಪ್ರಗತಿ ಪರಿಶೀಲನೆ ನಡೆಸಿ ಸಂಘದ ಕಾರ್ಯ ಚಟುವಟಿಕೆಗಳ ಬಗ್ಗೆ ಪ್ರಶಂಶಿಸಿದರು. ಸಂಘದ ಪರವಾಗಿ ಅಧ್ಯಕ್ಷರಾದ ಸೋಮಶೇಖರ ಕೊಯಿಂಗಾಜೆ ರವರು ಅಭಿನಂದಿಸಿದರು.
















ಈ ಸಂದರ್ಭದಲ್ಲಿ ಸುಳ್ಯ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರಾದ ನಾಗರಾಜ್, ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವೀರೇಂದ್ರ ಕುಮಾರ್ ಜೈನ್ ಹಾಗೂ ನಿರ್ದೇಶಕರಾದ ಹಮೀದ್ ಎಚ್ ಉಪಸಿತರಿದ್ದರು.










