ಮರ್ಕಂಜ : ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ, ಹಾಗೂ ನೂತನ ಶಾಸಕರಿಗೆ ಅಭಿನಂದನೆ

0

ಕಾರ್ಯಕರ್ತರಿಗೆ ಅಭಿನಂದನಾ ಕಾರ್ಯಕ್ರಮ

ಮರ್ಕಂಜ ಗ್ರಾಮದಲ್ಲಿ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ, ಹಾಗೂ ನೂತನ ಶಾಸಕರಿಗೆ ಅಭಿನಂದನೆ, ಹಾಗೂ ಕಾರ್ಯಕರ್ತರಿಗೆ ಅಭಿನಂದನಾ ಕಾರ್ಯಕ್ರಮವು ಜು.3ರಂದು ನಡೆಯಿತು.

ಮರ್ಕಂಜ ಗ್ರಾಮ ಪಂಚಾಯತ್ ನ ಯೋಗ ಕೇಂದ್ರಕ್ಕೆ ಶಂಕುಸ್ಥಾಪನೆ ಹಾಗೂ ಗೋಳಿಯಡ್ಕ ಮಿನುಂಗೂರು ಕಾಂಕ್ರೀಟ್ ರಸ್ತೆಯ ಉದ್ಘಾಟನೆ ಕಾರ್ಯಕ್ರಮವನ್ನು ಶಾಸಕಿ ಭಾಗೀರಥಿ ಮುರಳ್ಯ ನೆರವೇರಿಸಿದರು. ಬಳಿಕ ಸಭಾ ಕಾರ್ಯಕ್ರಮ ನಡೆಯಿತು.


ಸಭಾ ಕಾರ್ಯಕ್ರಮದಲ್ಲಿ ಭಾರತೀಯ ಜನತಾ ಪಾರ್ಟಿಯ ಸುಳ್ಯ ಮಂಡಲದ ಅದ್ಯಕ್ಷರಾದ ಹರೀಶ್ ಕಂಜಿಪಿಲಿ, ಪ್ರಧಾನ ಕಾರ್ಯದರ್ಶಿ ಸುಭೋದ್ ಶೆಟ್ಟಿ ಮೇನಾಲ, ಮರ್ಕಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಉಪಾಧ್ಯಕ್ಷರಾದ ಲಿಂಗಪ್ಪ ನಾಯ್ಕ ಹಾಗೂ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಪವಿತ್ರ ಗುಂಡಿ ಭಾಗವಹಿಸಿದ್ದರು. ಪುಟಾಣಿ ಮಕ್ಕಳ ಪ್ರಾರ್ಥನೆಯೊಂದಿಗೆ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಮರ್ಕಂಜ ಗ್ರಾಮದ ಸಹಕಾರಿ ಸಂಘ, ಮಹಿಳಾ ಮಂಡಳಿ, ಗ್ರಾಮ ಪಂಚಾಯತ್ ಹಾಗೂ ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರಿಂದ ನೂತನ ಶಾಸಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಪಂಚಾಯತ್ ಉಪಾಧ್ಯಕ್ಷ ಗೋವಿಂದ ಅಳವುಪಾರೆ ಸ್ವಾಗತಿಸಿದರು. ಮಹೇಶ್ ಪುರ ವಂದಿಸಿದರು. ಹರ್ಷಿತ್ ಮಿತ್ತಡ್ಕ ಕಾರ್ಯಕ್ರಮ ನಿರೂಪಿಸಿದರು.