ಸುಳ್ಯ ಮರಾಟಿ ಸಂಘದಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ ಜು. 20 ಕೊನೆಯ ದಿನಾಂಕ

0

ಸುಳ್ಯ ತಾಲೂಕು ಮರಾಟಿ ಸಮಾಜ ಸೇವಾ ಸಂಘದ ಆಶ್ರಯದಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಕೊಡಮಾಡುವ ವಿದ್ಯಾರ್ಥಿ ವೇತನಕ್ಕೆ ಅರ್ಹ ಮರಾಟಿ ಜನಾಂಗದ ವಿದ್ಯಾರ್ಥಿಗಳಿಂದ‌ ಅರ್ಜಿ ಆಹ್ವಾನಿಸಲಾಗಿದೆ.

2022-23ನೇ ಸಾಲಿನಲ್ಲಿ ಎಸ್.ಎಸ್. ಎಲ್.ಸಿ ಮತ್ತು ದ್ವಿತೀಯ ಪಿ.ಯು‌.ಸಿ ಪರೀಕ್ಷೆಯಲ್ಲಿ ಶೇ 80ಕ್ಕಿಂತ ಹೆಚ್ಚು ಅಂಕ ಪಡೆದು ಉತ್ತೀರ್ಣರಾದ ಸಂಘದ ಸದಸ್ಯರ ಮಕ್ಕಳು ಜು. 20ರ ಮೊದಲಾಗಿ ಸಂಘದ ಕಚೇರಿ ಅಂಬಟೆಡ್ಕ ಸುಳ್ಯ ಇಲ್ಲಿ ತಮ್ಮ ಅಂಕಪಟ್ಟಿ, ಜಾತಿ ಪ್ರಮಾಣಪತ್ರವನ್ನು ನೀಡಬೇಕು.

ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ಜು. 23ರಂದು ನಡೆಯಲಿರುವ‌ ಸಂಘದ ಮಹಾಸಭೆಯಲ್ಲಿ ವಿತರಿಸಲಾಗುವುದೆಂದು ಸಂಘದ ಕಾರ್ಯಕಾರಿ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ. ಮಾಹಿತಿಗಾಗಿ ಮೊ. 944 858 5460 ನ್ನು ಸಂಪರ್ಕಿಸಿ.