ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಲಿಜನ್ ವತಿಯಿಂದ ಪುಸ್ತಕ ವಿತರಣೆ

0

ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಲಿಜನ್ ವತಿಯಿಂದ ಜು.4 ರಂದು ದೇವರಹಳ್ಳಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಮಾಡಲಾಯಿತು.

ಸಭಾಧ್ಯಕ್ಷತೆಯನ್ನು ಸೀನಿಯರ್ ಚೇಂಬರ್ ಸುಬ್ರಹ್ಮಣ್ಯ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಲಿಜನ್ ಅಧ್ಯಕ್ಷ ವಿಶ್ವನಾಥ ನಡುತೋಟ ವಹಿಸಿದ್ದರು . ಪುಸ್ತಕದ ದಾನಿಗಳಾದ ಸೀನಿಯರ್ ಚೇಂಬರ್ ನ ನಿರ್ದೇಶಕರು, ರೋಟರಿ ಕ್ಲಬ್ ಪೂರ್ವಾಧ್ಯಕ್ಷರಾದ ಲೊಕೇಶ್, ಶಾಲಾ ಅಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ದೇವದಾಸ್ ಮಣಿ ಬೈಲು ಮುಖ್ಯ ಅತಿಥಿಗಳಾಗಿದ್ದರು.

ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ವಾಣಿ, ಸೀನಿಯರ್ ಚೇಂಬರ್ ಕಾರ್ಯದರ್ಶಿ ಪ್ರಕಾಶ್ ಕಟ್ಟೆಮನೆ, ಕೋಶಾಧಿಕಾರಿ ಮೋನಪ್ಪಡಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.