ಸ್ಥಳ ನಿಯುಕ್ತಿ ಮತ್ತು ನೇಮಕಾತಿ ಆದೇಶ ಪ್ರತಿಗಾಗಿ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕ ಅಭ್ಯರ್ಥಿಗಳಿಂದ ಪ್ರತಿಭಟನೆ

0


ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಾಗಿ ನೇಮಕಾತಿಗೊಂಡರೂ ಸ್ಥಳ ನಿಯುಕ್ತಿ ಮತ್ತು ನೇಮಕಾತಿ ಆದೇಶ ಆಗದ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕ ಅಭ್ಯರ್ಥಿಗಳು ಜುಲೈ 3 ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಧರಣಿ ನಡೆಸಿ ಪ್ರತಿಭಟನೆಗೆ ಮುಂದಾಗಿದ್ದು, ಇದರಲ್ಲಿ ಸುಳ್ಯ ತಾಲೂಕಿನ ಹಲವರು ಕೂಡಾ ಪಾಲ್ಗೊಂಡಿದ್ದಾರೆ.


2022 ಮೇ ತಿಂಗಳಲ್ಲಿ 1೦5೦೦ ಪದವೀಧರ ಪ್ರಾಥಮಿಕ ಶಿಕ್ಷಕರ ಹುದ್ದೆಗಳ ನೇಮಕಾತಿಗೆ ನಡೆದ ಸ್ಪರ್ಧಾತ್ಮಕ ಪರೀಕ್ಷೆಯನ್ನು ಸುಮಾರು 7೦೦೦೦ ಅಭ್ಯರ್ಥಿಗಳು ಬರೆದಿದ್ದು, ಅದರಲ್ಲಿ 13352 ಅಭ್ಯರ್ಥಿಗಳು ಆಯ್ಕೆಗೊಂಡಿದ್ದರು. ನೇಮಕಾತಿ ವಿಷಯದಲ್ಲಿ ಕಾನೂನು ಸಮಸ್ಯೆನ್ನು ಮುಂದಿಟ್ಟು ಕೆಲವರು ನ್ಯಾಯಾಲಯದ ಮೊರೆ ಹೋದ ಹಿನ್ನಲೆಯಲ್ಲಿ ನೇಮಕಾತಿ ವಿಳಂಬವಾಗುತ್ತಿದೆ.


ಈ ಹಿನ್ನಲೆಯಲ್ಲಿ ನೇಮಕಾತಿ ಆದೇಶ ಮತ್ತು ಸ್ಥಳ ನಿಯುಕ್ತಿಗಾಗಿ ಈ ಅಭ್ಯರ್ಥಿಗಳು ಪ್ರತಿಭಟನೆಯ ದಾರಿ ಹಿಡಿದಿದ್ದಾರೆ. ಜುಲೈ ೩ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಧರಣಿಗೆ ಮುಂದಾಗಿದ್ದಾರೆ. ಸುಳ್ಯದಿಂದಲೂ ಹಲವು ಮಂದಿ ಈ ಹುದ್ದೆಗಳಿಗೆ ಆಯ್ಕೆಯಾಗಿದ್ದು, ಇವರಲ್ಲಿ ಹಲವರು ಪ್ರತಿಭಟನೆಯಲ್ಲಿ ಭಾಗಿಯಾಗಿರುವುದಾಗಿ ತಿಳಿದುಬಂದಿದೆ.