ಸುಳ್ಯ ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆಯಲ್ಲಿ ಶಿಶ್ಯೋಪನಯನ, ಗಣಪತಿ ಹವನ ಧನ್ವಂತರಿ ಪೂಜೆ

0

ಸುಳ್ಯದ ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಜು. 08ರಂದು ಪುರೋಹಿತ ನಾಗರಾಜ್ ಭಟ್ ಹಾಗೂ ನಟರಾಜ್ ಭಟ್ ರವರ ಪೌರೋಹಿತ್ಯ ದಲ್ಲಿ ಗಣಪತಿ ಹವನ ಸಹಿತ ಧನ್ವಂತರಿ ಪೂಜೆ ಹಾಗೂ ಈ ವರ್ಷದ ಬಿ.ಎ.ಯಂ.ಯಸ್. ಬ್ಯಾಚ್ ನ ವಿದ್ಯಾರ್ಥಿಗಳಿಗೆ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಶಿಶ್ಯೋಪನಯನ ಹಾಗೂ ಸ್ವಾಗತ ಕಾರ್ಯಕ್ರಮ ನಡೆಯಿತು.


ಕಾರ್ಯಕ್ರಮದಲ್ಲಿ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ಅಧ್ಯಕ್ಷ ಡಾ. ಕೆ.ವಿ. ಚಿದಾನಂದ, ಪ್ರಧಾನ ಕಾರ್ಯದರ್ಶಿ ಅಕ್ಷಯ್ ಕೆ.ಸಿ., ಉಪಾಧ್ಯಕ್ಷೆ ಶೋಭಾ ಚಿದಾನಂದ, ಕಾರ್ಯದರ್ಶಿಗಳಾದ ಡಾ. ಐಶ್ವರ್ಯ ಕೆ.ಸಿ., ಕೆ. ವಿ. ಹೇಮನಾಥ, ಕೌನ್ಸಿಲ್ ಮೆಂಬರ್ ಶ್ರೀಮತಿ ಮೀನಾಕ್ಷಿ ಹೇಮನಾಥ್, ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಪ್ರಾಂಶುಪಾಲರಾದ ಡಾ. ಲೀಲಾಧರ್ ಡಿ.ವಿ., ಸಂಸ್ಥೆಯ ಬೋಧಕ ಬೋಧಕೇತರ ಸಿಬ್ಬಂದಿ ವರ್ಗದವರು, ಸ್ನಾತಕೋತ್ತರ ವಿದ್ಯಾರ್ಥಿಗಳು, ಪದವಿ ವಿದ್ಯಾರ್ಥಿಗಳು, ಕಲಿಕಾ ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿಗಳ ಹೆತ್ತವರು ಉಪಸ್ಥಿತರಿದ್ದರು.