ಯುವಕನಿಂದ ಅಪ್ರಾಪ್ತ ಬಾಲಕಿಯ ಅತ್ಯಾಚಾರ

0

ಯುವಕನ ಬಂಧನ – ಪೋಕ್ಸೋ ಪ್ರಕರಣ ದಾಖಲು

ಅಪ್ರಾಪ್ತ ಬಾಲಕಿಯೊಬ್ಬಳನ್ನು ಅತ್ಯಾಚಾರ ಮಾಡಿದ ಯುವಕನ ಮೇಲೆ ಪೋಕ್ಸೋ ಪ್ರಕರಣ ದಾಖಲಾದ ಘಟನೆ ಜು.07 ರಂದು ನಡೆದಿದೆ.
ಕಲ್ಮಡ್ಕ ಗ್ರಾಮದ ಕಾರ್ತಿಕ್ ಎಂಬಾತನು ಉಬರಡ್ಕದ ಯುವತಿಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ಅಪ್ರಾಪ್ತ ವಯಸ್ಕಳು ಗರ್ಭವತಿಯಾಗಿದ್ದು ಬಾಲಕಿಯ ತಾಯಿ ಬೆಳ್ಳಾರೆ ಠಾಣೆಯಲ್ಲಿ ದೂರು ನೀಡಿದ್ದು ಪ್ರಕರಣ ದಾಖಲಿಸಿಕೊಂಡ ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿದ್ದಾರೆ.


ಜು.7 ರಂದು ಉಬರಡ್ಕದ ಬಾಲಕಿ ಹೊಟ್ಟೆನೋವು ಎಂದು ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದು ವೈದ್ಯರು ಪರೀಕ್ಷಿಸಿ ಸ್ಕ್ಯಾನಿಂಗ್ ಮಾಡಿಸಲು ತಿಳಿಸಿದ್ದು ಸ್ಕ್ಯಾನಿಂಗ್ ನಲ್ಲಿ ಬಾಲಕಿ 4 ತಿಂಗಳ ಗರ್ಭಿಣಿ ಆಗಿರುವ ವಿಚಾರ ತಿಳಿದು ಬಂತೆನ್ನಲಾಗಿದೆ.


ಈ ಬಗ್ಗೆ ಬಾಲಕಿಯಲ್ಲಿ ವಿಚಾರಿಸಿದಾಗ ಕಲ್ಮಡ್ಕದ ಕಾರ್ತಿಕ್ ಎಂಬಾತ ದೈಹಿಕ ಸಂಪರ್ಕ ಎಸಗಿರುವುದನ್ನು ಮನೆಯವರಲ್ಲಿ ತಿಳಿಸಿದ್ದು ಈ ಬಗ್ಗೆ ಬಾಲಕಿಯ ತಾಯಿ ಬೆಳ್ಳಾರೆ ಠಾಣೆಯಲ್ಲಿ ಕಾರ್ತಿಕ್ ವಿರುದ್ದ ಪೊಲೀಸು ದೂರು ನೀಡಿದ್ದರು.