ಸುಳ್ಯ ಸೈಂಟ್ ಜೋಸೆಫ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವನಮಹೋತ್ಸವ ದಿನಾಚರಣೆ

0

ಸುಳ್ಯ ಸೈಂಟ್ ಜೋಸೆಫ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜು.08 ರಂದು ವನಮಹೋತ್ಸವ ದಿನಾಚರಣೆಯನ್ನು ಆಚರಿಸಲಾಯಿತು.
ಶಾಲಾ ಸಂಚಾಲಕರಾದ ರೆ. ಫಾ. ವಿಕ್ಟರ್ ಡಿಸೋಜ ಇವರ ಉಪಸ್ಥಿತಿಯಲ್ಲಿ ವನಮಹೋತ್ಸವ ದಿನಾಚರಣೆ ನಡೆಯಿತು.


ಶಾಲಾ ವಿದ್ಯಾರ್ಥಿನಿ ಅನುಜ್ಞ ಎ ವನಮಹೋತ್ಸವ ದಿನಾಚರಣೆಯ ಪ್ರಾಮುಖ್ಯತೆಯ ಬಗ್ಗೆ ಮಾತನಾಡಿದರು. ಶಾಲಾ ಮುಖ್ಯೋಪಾಧ್ಯಾಯನಿ ಸಿಸ್ಟರ್ ಬಿನೋಮಾ, ಶಿಕ್ಷಕ ವೃಂದ, ಸ್ಕೌಟ್ ಗೈಡ್ಸ್ ವಿದ್ಯಾರ್ಥಿಗಳು ಶಾಲಾ ಆವರಣದಲ್ಲಿ ವಿವಿಧ ಗಿಡಗಳನ್ನು ನೆಡುವುದರ ಮೂಲಕ ವನಮಹೋತ್ಸವವನ್ನು ಆಚರಿಸಲಾಯಿತು.