ಕಾಡು ಪ್ರಾಣಿಗಳ ಬೇಟೆ: ಮಾಂಸ, ಕೋವಿ ವಶ

0

ಸಂಪಾಜೆ ವಲಯದ ದಬ್ಬಡ್ಕ ಉಪ ವಲಯದ, ಪಟ್ಟಿಘಾಟ್ ಮೀಸಲು ಅರಣ್ಯದಲ್ಲಿ ಕಾಡು ಪ್ರಾಣಿ ಬೇಟೆಯಾಡಿದ ಆರೋಪಿಗಳ ಮನೆಗೆ ಅಧಿಕಾರಿಗಳು ದಾಳಿ ನಡೆಸಿ ಮಾಂಸ ಹಾಗೂ ಕೋವಿಯನ್ನು ವಶಪಡಿಸಿಕೊಂಡಿದ್ದರು.

ಮದನ್ ಕುಮಾರ್ ಹೊಸೂರು, ಪನೇಡ್ಕ ಗಣಪತಿ, ಹಾಗೂ ಪ್ರಸನ್ನ ಪನೇಡ್ಕ ಇವರ ಮನೆಗೆ ದಾಳಿ ಮಾಡಿ ಮಾಂಸ ಮತ್ತು ಕೋವಿಯನ್ನು ವಶಪಡಿಸಿಕೊಳ್ಳಲಾಯಿತು.

ಆರೋಪಿಗಳು ತಲೆಮರೆಸಿಕೊಂಡಿದ್ದಾರೆಂದು ತಿಳಿದುಬಂದಿದೆ. ಉಪ ಅರಣ್ಯ ಸಂರಕ್ಷಣಾಧಿಕಾರಿ ಕೆ. ಟಿ ಪೂವಯ್ಯ ಇವರ ಮಾರ್ಗದರ್ಶನದಲ್ಲಿ, ವಲಯ ಅರಣ್ಯ ಅಧಿಕಾರಿ ಮಧು ಸೂದನ್ ಇವರ ನೇತೃತ್ವದಲ್ಲಿ, ಸಿಬ್ಬಂದಿಗಳಾದ ಉಪ ವಲಯ ಅರಣ್ಯ ಅಧಿಕಾರಿ ನಿಸಾರ್ ಮಹೋಮ್ಮದ್, ಗಸ್ತು ಅರಣ್ಯ ಪಾಲಕರಾದ ಚಂದ್ರಪ್ಪ ಬಣಕಾರ್, ಕಾರ್ತಿಕ್ ಡಿ. ಹಾಗೂ ಸಿಬ್ಬಂದಿಗಳಾದ ಮನೋಜ್, ದುರ್ಗಾ ಪ್ರಸಾದ್, ಗಗನ್, ಶರತ್, ಶಂಕರ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.