ಕುಕ್ಕುಜಡ್ಕ : ಚೊಕ್ಕಾಡಿ‌ ಪ್ರೌಢಶಾಲೆಯ ಸ್ಥಾಪನಾ ದಿನಾಚರಣೆ – ನೂತನ ಕಟ್ಟಡದ ಲೋಕಾರ್ಪಣೆ

0

ಸುವರ್ಣ ಸಂಭ್ರಮದ ಹೊಸ್ತಿಲಲ್ಲಿರುವ, ಭಗವಾನ್ ಶ್ರೀ ಸತ್ಯಸಾಯಿ ಬಾಬಾ ಉದ್ಘಾಟಿಸಿದ ಇತಿಹಾಸವಿರುವ ಶಾಲೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ : ಎಸ್.ಅಂಗಾರ

ಅಮರಮುಡ್ನೂರು ಗ್ರಾಮದ ಕುಕ್ಕುಜಡ್ಕದಲ್ಲಿರುವ ಚೊಕ್ಕಾಡಿ‌ ಪ್ರೌಢಶಾಲೆಯ ಸ್ಥಾಪನಾ ದಿನಾಚರಣೆ ಹಾಗೂ ನೂತನ ಕಟ್ಟಡದ ಉದ್ಘಾಟನೆಯು ಜು.14 ರಂದು ನಡೆಯಿತು.

ಸಮಾರಂಭದ ಅಧ್ಯಕ್ಷತೆಯನ್ನು ಮಾಜಿ ಶಾಸಕರು, ಸಚಿವರು, ಶಾಲಾ ಆಡಳಿತ ಸಮಿತಿಯ ಅಧ್ಯಕ್ಷ ಎಸ್.ಅಂಗಾರ ರವರು ಅಧ್ಯಕ್ಷತೆ ವಹಿಸಿದ್ದರು.

ನಿವೃತ್ತ ಶಿಕ್ಷಕ ಪ್ರಗತಿಪರ ಶಿಕ್ಷಕಎಂ.ಟಿ.ಶಾಂತಿಮೂಲೆ ಯವರು ಶಾಲೆಯ ನೂತನ ಕಟ್ಟಡವನ್ನು ಉದ್ಘಾಟಿಸಿದರು.
ವೇದಿಕೆಯಲ್ಲಿ ಶಾಲಾ ಆಡಳಿತ ಮಂಡಳಿಯ ಸಂಚಾಲಕ ರಾಧಾಕೃಷ್ಣ ಬೊಳ್ಳೂರು, ವಿಟ್ಲ ಅಡ್ಯನಡ್ಕ ಜನತಾ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಸೋಮಶೇಖರ ಹೆಚ್, ನಿವೃತ್ತ ಮುಖ್ಯ ಶಿಕ್ಷಕ ವಿ. ಸುಬ್ರಾಯ , ಆಡಳಿತ ಸಮಿತಿಯ ಕಾರ್ಯದರ್ಶಿ ತೇಜಸ್ವಿ ಕಡಪಳ, ಖಜಾಂಜಿ ಹರ್ಷವರ್ಧನ ಬೊಳ್ಳೂರು, ನಿರ್ದೇಶಕ ಆನಂದ ಚಿಲ್ಪಾರು, ಪ್ರೌಢಶಾಲೆಯ ಮುಖ್ಯ ಶಿಕ್ಷಕ ಸಂಕೀರ್ಣ ಎ. ಎಲ್,
ಆಂಗ್ಲ ಮಾಧ್ಯಮ ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಚೈತ್ರ ರವರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ 2022-23 ನೇ ಸಾಲಿನ ಎಸ್.ಎಸ್.ಎಲ್.ಸಿ.
ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಗಳಿಸಿವಿದ್ಯಾರ್ಥಿಗಳಾದ ಶ್ರಾವ್ಯ ಎನ್.ಪಿ, ಮಾನ್ಯಶ್ರೀ , ಯಶ್ವಿತ್, ಮೇಘನಾ ರವರನ್ನು ಅಭಿನಂದಿಸಲಾಯಿತು. ಭಾವಗೀತೆ ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.

ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಕಾರ್ಯದರ್ಶಿ ತೇಜಸ್ವಿ ಕಡಪಳ ಪ್ರಾಸ್ತಾವಿಕ ಮಾತಿನೊಂದಿಗೆ ಸ್ವಾಗತಿಸಿದರು. ಮುಖ್ಯ ಶಿಕ್ಷಕ ಸಂಕೀರ್ಣ ಎ.ಎಲ್ ವಂದಿಸಿದರು. ಸಹಶಿಕ್ಷಕಿ ಸಂಧ್ಯಾಕುಮಾರಿ ಕಾರ್ಯಕ್ರಮ ನಿರೂಪಿಸಿದರು.


ಸ್ಥಳೀಯ ಪಂಚಾಯತ್ ಸದಸ್ಯರು, ಶಾಲಾ ಶಿಕ್ಷಕರು,ಶಾಲಾ ಆಡಳಿತ ಸಮಿತಿಯ ಸದಸ್ಯರು, ಅದ್ಯಾಪಕ ವೃಂದದವರು, ಪೋಷಕರು, ಹಿರಿಯ ವಿದ್ಯಾರ್ಥಿ ಸಂಘದ ಶಿಕ್ಷಕ ರಕ್ಷಕ ಸಂಘದ ಸದಸ್ಯರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಶಾಲಾ ಅದ್ಯಾಪಕರು ಮತ್ತು ಸಿಬ್ಬಂದಿ ವರ್ಗದವರು ಸಹಕರಿಸಿದರು.

ಚುನಾಯಿತ ಪ್ರತಿನಿಧಿ ಅಲ್ಲದಿದ್ದರೂ ಶಾಲೆಯ ಮೇಲಿನ ಅಭಿಮಾನದಿಂದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೇನೆ. ಶಾಲೆಯ ಸರ್ವತೋಮುಖ ಅಭಿವೃದ್ಧಿಯ ಸಮರ್ಪಕ ನಿರ್ವಹಣೆಯ ಹೊಣೆಗಾರಿಕೆ ನನ್ನ ಮೇಲಿದೆ. ವಿದ್ಯಾ ಸಂಸ್ಥೆಯಲ್ಲಿ ಮಕ್ಕಳ ಭವಿಷ್ಯ ನಿರ್ಮಾಣದ ಉದ್ದೇಶದಿಂದ ಶಿಕ್ಷಣ ಪದ್ಧತಿಯಲ್ಲಿ ಬದಲಾವಣೆಯ ಅವಶ್ಯಕತೆ ಇದೆ. ಭಗವಾನ್ ಶ್ರೀ ಸತ್ಯಸಾಯಿ ಬಾಬಾ ರವರು ಉದ್ಘಾಟಿಸಿರುವ ಈ ಶಾಲೆಯು ಸುವರ್ಣ ಸಂಭ್ರಮದ ಹೊಸ್ತಿಲಲ್ಲಿದೆ. ತಾಲೂಕಿನಲ್ಲಿ ಎಲ್ಲಾ ಮೂಲಭೂತ ಸೌಕರ್ಯವಿರುವ ಸುಮಾರು 30 ಸರಕಾರಿ ಶಾಲೆಗಳು ಮಕ್ಕಳ ಕೊರತೆಯಿಂದ ಮುಚ್ಚುವ ಸ್ಥಿತಿ ತಲುಪಿರುವುದು ಅಘಾತಕಾರಿ ವಿಚಾರವಾಗಿದೆ-ಎಸ್.ಅಂಗಾರ

ಊರ ವಿದ್ಯಾಭಿಮಾನಿಗಳ ಸಹಕಾರದಿಂದ ಶಾಲೆ ಸ್ಥಾಪನೆಗೊಂಡಿದೆ. ಬಡತನದ ಅಂಚಿನಲ್ಲಿ ಇದ್ದ ಕಾಲ ಘಟ್ಟದಲ್ಲಿ ಬಡ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎಂಬ ದೂರಾಲೋಚನೆಯಿಂದ ಶಾಲೆ ಪ್ರಾರಂಭಿಸಲಾಯಿತು. ಹಿರಿಯರ ಮತ್ತು ಎಲ್ಲಾ ವರ್ಗದ ಜನತೆಯ ಉದಾರತೆಯಿಂದ ಶಾಲೆ ಅಭಿವೃದ್ಧಿ ಹೊಂದಿದೆ. ಮಾಜಿ ಶಾಸಕ ಎಸ್.ಅಂಗಾರ ರವರ ಕೊಡುಗೆ ಅಪಾರವಿದೆ-ರಾಧಾಕೃಷ್ಣ ಬೊಳ್ಳೂರು