ಕೇರ್ಪಡ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆಯ ಪೂರ್ವಭಾವಿ ಸಭೆ

0

ಕೇರ್ಪಡ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಪ್ರತಿವರ್ಷದಂತೆ ಶ್ರೀ ವರಮಹಾಲಕ್ಷ್ಮಿ ಪೂಜೆ ನಡೆಯಲಿದ್ದು ಆ ಪ್ರಯುಕ್ತ ಜುಲೈ 14 ರಂದು ದೇವಾಳದ ವಠಾರದಲ್ಲಿ ಸಭೆ ನಡೆಯಿತು.


ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ವಸಂತನಡು ಬೈಲುರವರು ಅಧ್ಯಕ್ಷತೆ ವಹಿಸಿದ್ದರು. ವ್ಯವಸ್ಥಾಪನಾ ಸಮಿತಿ ಸದಸ್ಯರುಗಳು, ಸೇವಾ ಸಮಿತಿ ಪದಾಧಿಕಾರಿಗಳು, ಭಕ್ತಾದಿಗಳು ಉಪಸ್ಥಿತರಿದ್ದರು.