ಸುಳ್ಯ ತಾಲೂಕು ಮಟ್ಟದ ಕ್ರೀಡಾಸ್ಪರ್ಧೆಗಳ ನಿರ್ವಹಣೆಯ ಬಗ್ಗೆ ಪೂರ್ವಭಾವಿ ಸಭೆ

0

ಶಾಲಾ ಶಿಕ್ಷಣ ಇಲಾಖೆ ಸುಳ್ಯ ತಾಲೂಕು ಹಾಗೂ ಸೈಂಟ್ ಜೋಸೆಫ್ ವಿದ್ಯಾಸಂಸ್ಥೆಗಳು ಸುಳ್ಯ ಇದರ ಜಂಟಿ ಆಶ್ರಯದಲ್ಲಿ 2023 -24ರ ಸಾಲಿನ ಸುಳ್ಯ ತಾಲೂಕು ಮಟ್ಟದ ಕ್ರೀಡಾ ಸ್ಪರ್ಧೆಗಳ ನಿರ್ವಹಣೆಯ ಪೂರ್ವಭಾವಿ ಸಭೆಯು ಜು.14 ರಂದು ಸೈಂಟ್ ಬ್ರಿಜಿಡ್ಸ್ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು.
ಸಭಾ ಕಾರ್ಯಕ್ರಮವನ್ನು ಸುಳ್ಯ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಬಿ .ರಮೇಶ್ ಉದ್ಘಾಟಿಸಿ, ಸಭಾಧ್ಯಕ್ಷತೆ ವಹಿಸಿ ಶಿಕ್ಷಣ ಇಲಾಖೆಯ ವಿವಿಧ ಚಟುವಟಿಕೆಗಳ ಬಗ್ಗೆ ಹಾಗೂ ಶಾಲೆಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕರ ಕರ್ತವ್ಯಗಳ ಬಗ್ಗೆ ತಿಳಿಸಿದರು.


ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಸೂಫಿ ಪೆರಾಜೆ ಇವರು ಕ್ರೀಡಾ ಸ್ಪರ್ಧೆಗಳು ನಡೆಯುವ ಸ್ಥಳ ಹಾಗೂ ದಿನಾಂಕದ ಬಗ್ಗೆ ಸಭೆಯಲ್ಲಿ ತಿಳಿಸಿದರು.

ವೇದಿಕೆಯಲ್ಲಿ ಸೈಂಟ್ ಜೋಸೆಫ್ ಪೋಷಕರ ಸಮಿತಿಯ ಅಧ್ಯಕ್ಷರಾದ ಶ್ರೀ ಜೆ.ಕೆ .ರೈ, ಶ್ರೀಮತಿ ಉಮಾಕುಮಾರಿ ಉಪ ಪ್ರಾಂಶುಪಾಲರು ಕೆಪಿಎಸ್ ಬೆಳ್ಳಾರೆ, ಗಣೇಶ್ ಏನೆಕ್ಕಲ್ ಅಧ್ಯಕ್ಷರು ಗ್ರೇಡ್ 1 ದ.ಕ.ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘ, ಶ್ರೀಮತಿ ವನಿತಾ ಅಧ್ಯಕ್ಷರು , ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಸುಳ್ಯ ತಾಲೂಕು, ಯೋಗೀಶ್ ಪಂಜ, ಉಪಾಧ್ಯಕ್ಷರು ದ.ಕ.ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘ, ಧನಂಜಯ, ಅಧ್ಯಕ್ಷರು ಗ್ರೇಡ್ 2 ಸುಳ್ಯ ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘ ವೇದಿಕೆಯಲ್ಲಿ ಉಪಸ್ಥಿತರಿದ್ದರು.


ಸೈಂಟ್ ಜೋಸೆಫ್ ವಿದ್ಯಾ ಸಂಸ್ಥೆಯ ಮುಖ್ಯ ಶಿಕ್ಷಕಿ ಸಿಸ್ಟರ್ ಬಿನೋಮ ಸ್ವಾಗತಿಸಿ, ದೈಹಿಕ ಶಿಕ್ಷಣ ಶಿಕ್ಷಕಿ ಪುಷ್ಪವೇಣಿ ವಂದಿಸಿ ,ದೈಹಿಕ ಶಿಕ್ಷಣ ಶಿಕ್ಷಕರಾದ ಕೊರಗಪ್ಪ ಬೆಳ್ಳಾರೆ ಹಾಗೂ ಉಮೇಶ್ ಪಂಜದಬೈಲು ಕಾರ್ಯಕ್ರಮ ನಿರೂಪಿಸಿದರು.