ಶ್ರೀ ಶಾರದಾ ಹೆಣ್ಣು ಮಕ್ಕಳ ಪ್ರೌಢಶಾಲೆಯ ನೂತನ ಮಂತ್ರಿಮಂಡಲ

0

ಶ್ರೀ ಶಾರದಾ ಹೆಣ್ಣು ಮಕ್ಕಳ ಪ್ರೌಢಶಾಲೆಯಲ್ಲಿ 2023- 24ರ ಸಾಲಿನ ಶಾಲಾ ಮಂತ್ರಿಮಂಡಲ ಹಾಗೂ ವಿವಿಧ ಸಂಘಗಳ ಉದ್ಘಾಟನಾ ಕಾರ್ಯಕ್ರಮವು ಜು.15 ರಂದು ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ದಕ್ಷಿಣ ಕನ್ನಡ ಗೌಡ ವಿದ್ಯಾಸಂಘದ ಅಧ್ಯಕ್ಷರಾದ ಶ್ರೀ ಧನಂಜಯ ಅಡ್ಪಂಗಾಯರವರು ವಹಿಸಿದರು.

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಪದವಿ ಕಾಲೇಜಿನ ಸಮಾಜಶಾಸ್ತ್ರ ಉಪನ್ಯಾಸಕರಾದ ಶ್ರೀಮತಿ ಆರತಿಯವರು ಕಾರ್ಯಕ್ರಮವನ್ನು ಉದ್ಘಾಟಿಸಿ, ವಿದ್ಯಾರ್ಥಿಗಳು ಆತ್ಮವಿಶ್ವಾಸದೊಂದಿಗೆ ತಮ್ಮ ಗುರಿಗಳನ್ನು ಹೇಗೆ ಸಾಧಿಸಬೇಕೆಂದು ತಿಳಿಸಿದರು. ವೇದಿಕೆಯಲ್ಲಿ ಶಾಲಾ ಮುಖ್ಯೋಪಾಧ್ಯಾಯರು ಹಾಗೂ ಪದವಿಪೂರ್ವ ಕಾಲೇಜಿನ ಉಪನ್ಯಾಸಕರಾದ ಶ್ರೀಮತಿ ಸ್ವರ್ಣಕಲಾರವರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಶಿಕ್ಷಕ ವೃಂದದವರು, ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಪ್ರಭಾವತಿ .ಎಸ್ ದೈಹಿಕ ಶಿಕ್ಷಣ ಶಿಕ್ಷಕರು ನೂತನ ಪದಾಧಿಕಾರಿಗಳಿಗೆ ಪ್ರಮಾಣ ವಚನ ಮಾಡಿದರು. ಶ್ರೀಮತಿ ಅರ್ಪಣಾ.ಜಿ.ಕೆ ಕಾರ್ಯಕ್ರಮ ನಿರೂಪಿಸಿದರು.