Home ಪ್ರಚಲಿತ ಸುದ್ದಿ ಮುಸ್ಲಿಂ ಒಕ್ಕೂಟದ ಮುಖಂಡರಿಂದ ಯು ಟಿ ಖಾದರ್ ರವರಿಗೆ ಸನ್ಮಾನ

ಮುಸ್ಲಿಂ ಒಕ್ಕೂಟದ ಮುಖಂಡರಿಂದ ಯು ಟಿ ಖಾದರ್ ರವರಿಗೆ ಸನ್ಮಾನ

0

ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷ ಯು ಟಿ ಖಾದರ್ ಅವರನ್ನು ಜು 17 ರಂದು ಬೆಂಗಳೂರಿನ ಅವರ ನಿವಾಸದಲ್ಲಿ ಮುಸ್ಲಿಂ ಒಕ್ಕೂಟದ ಮುಖಂಡರು ಭೇಟಿ ಮಾಡಿ ಸನ್ಮಾನಿಸಿದರು.

ಗ್ರೇಟ್ ಸನ್ ಆಫ್ ಇಂಡಿಯಾ ಅವಾರ್ಡ್ ಪಡೆದಿರುವ ಯು ಟಿ ಖಾದರ್ ರವರನ್ನು ಸುಳ್ಯ ಅಲ್ಪಸಂಖ್ಯಾತರ ಸಹಕಾರಿ ಸಂಘದ ಅಧ್ಯಕ್ಷ,ಸುಳ್ಯ ತಾಲೂಕು ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಮೊಹಮ್ಮದ್ ಇಕ್ಬಾಲ್ ಎಲಿಮಲೆ,ಹಾಗೂ ಮಾಜಿ ಜಿಲ್ಲಾ ಪರಿಷತ್ ಸದಸ್ಯ, ಕಡಬ ತಾಲೂಕು ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಹಾಜಿ ಸೈಯದ್ ಮೀರಾ ಸಾಹೇಬ್ ಸನ್ಮಾನಿಸಿ ಗೌರವಿಸಿದರು.
ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ಜಿಲ್ಲಾ ಕಾರ್ಯದ್ಯಕ್ಷ ಅಬ್ದುಲ್ ಜಲೀಲ್ ಬೈತಡ್ಕ ಉಪಸ್ಥಿತರಿದ್ದರು.

NO COMMENTS

error: Content is protected !!
Breaking