ಗಾಂಧಿನಗರ ಕರ್ನಾಟಕ ಪಬ್ಲಿಕ್ ಸ್ಕೂಲ್ ಪಿ ಯು ಕಾಲೇಜಿನಲ್ಲಿ ಫ್ರೆಶರ್ಸ್ ಡೇ ಆಚರಣೆ

0

ಪ್ರಥಮ ಪಿಯುಸಿ ತರಗತಿ ಆರಂಭಗೊಂಡಿದ್ದು ಇದರ ಅಂಗವಾಗಿ ಇಂದು ಗಾಂಧಿನಗರ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರಥಮ ಪಿ ಯು ಸಿ ವಿದ್ಯಾರ್ಥಿಗಳಿಗೆ ಫ್ರೆಶರ್ಸ್ ಡೇ ಹಮ್ಮಿಕೊಂಡು ವಿದ್ಯಾರ್ಥಿಗಳನ್ನು ಸ್ವಾಗತಿಸುವ ಕಾರ್ಯಕ್ರಮ ನಡೆಯಿತು.


ನಗರ ಪಂಚಾಯತ್ ಸದಸ್ಯ ಶರೀಫ್ ಕಂಠಿ ದೀಪ ಬೆಳಗಿಸಿ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿದರು.ಬಳಿಕ ಅವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿ ಮಾತನಾಡಿ ಈ ಶಾಲೆಯು 4 ವರ್ಷಗಳ ಹಿಂದೆ ಮೇಲ್ದರ್ಜೆಗೇರಿದ್ದು, ಸರಕಾರದಿಂದ ಸುಮಾರು 19 ಕೋಟಿ ಅನುದಾನವಿದ್ದು,ಸರಕಾರದೊಂದಿಗೆ ನಿರಂತರ ಸಂಪರ್ಕ ಸಾದಿಸಿ ಅತೀ ಶೀಘ್ರದಲ್ಲಿ ಅನುದಾನ ತರಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ತಿಳಿಸಿದರು.


ಎಸ್ ಡಿ ಎಂ ಸಿ ಕಾರ್ಯಾಧ್ಯಕ್ಷ ಚಿದಾನಂದ ಕಾಯರ್ತೋಡಿ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ’ ಮಕ್ಕಳು ಉತ್ತಮ ರೀತಿಯಲ್ಲಿ ವಿದ್ಯಾಭ್ಯಾಸ ಮಾಡಿ, ಮುಂದಿನ ದಿನಗಳಲ್ಲಿ ಕಲಿತ ಶಾಲೆಗೂ,ಸಮಾಜಕ್ಕೆ ಹಾಗೂ ಹೆತ್ತವರಿಗೆ ಕೀರ್ತಿ ತರಲಿ ಎಂದು ಶುಭ ಹಾರೈಸಿದರು.
ಅಲ್ಲದೆ ಎಲ್ಲರು ಜೊತೆಯಾಗಿ ಪಕ್ಷತೀತವಾಗಿ ಶಾಲೆಯ ಅಭಿವೃದ್ಧಿಗಾಗಿ ಶ್ರಮಿಸೋಣ ಎಂದು ಹೇಳಿದರು. ವೇದಿಕೆಯಲ್ಲಿ ಪ್ರಾಂಶುಪಾಲ ಅಬ್ದುಲ್ ಸಮದ್ ಹಾಗೂ ಅಧ್ಯಾಪಕ ವೃಂದದವರು ಉಪಸ್ಥಿತರಿದ್ದರು.


ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.