ಭಾರೀ ಮಳೆ : ಕುಮಾರಧಾರ ಸ್ನಾನ ಘಟ್ಟ ಮುಳುಗಡೆ

0

ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಇಂದು ಸಂಜೆ ಮುಳುಗಡೆಯಾಗಿದೆ.

ಘಟ್ಟ ಪ್ರದೇಶದಲ್ಲಿ ನಿನ್ನೆ ರಾತ್ರಿಯಿಂದ ಸುರಿಯುತ್ತಿರುವ ಭಾರೀ ಮಳೆಯಿಂದ ಇಂದು ನೀರಿನ ಹರಿವು ಹೆಚ್ಚಾಗಿದೆ.
ಸುಬ್ರಹ್ಮಣ್ಯದ ಪರಿಸರದಲ್ಲೂ ಎಡೆಬಿಡದೆ ಮಳೆ ಸುರಿಯುತ್ತಿದೆ. ಭಕ್ತಾಧಿಗಳಿಗೆ ನೀರಿಗಿಳಿಯದಂತೆ ಸೂಚನೆ ನೀಡಲಾಗಿದೆ. ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಭದ್ರತಾ ಸಿಬ್ಬಂದಿಗಳು ಭಕ್ತರು ನೀರಿಗಿಳಿಯದಂತೆ ನೋಡಿಕೊಳ್ಳತಿದ್ದಾರೆ. ಪೋಟೋ. ಪ್ರತಿರೂಪ ಸುಬ್ರಹ್ಮಣ್ಯ