ಸುಳ್ಯ ರಾಘವೇಂದ್ರ ಮಠದಲ್ಲಿ ಶ್ರಮದಾನ ಮತ್ತು ಉಚಿತ ವೈದ್ಯಕೀಯ ಶಿಬಿರ

0

ಸುಳ್ಯ ಶ್ರೀ ಗುರು ರಾಘವೇಂದ್ರ ಮಠದಲ್ಲಿ ಶ್ರಮದಾನ ಮತ್ತು ಉಚಿತ ವೈದ್ಯಕೀಯ ಶಿಬಿರವು ಜು.23 ರಂದು ನಡೆಯಿತು. ಡಾ. ಶ್ರೀವಿದ್ಯಾ ರವರು ವೈದ್ಯಕೀಯ ತಪಾಸಣೆ ನಡೆಸಿದರು.

ಶಿವಳ್ಳಿ ಸಂಪನ್ನದ ಅಧ್ಯಕ್ಷ ರಮೇಶ್ ಕುಮಾರ್ ಆರ್. ಕೆ ದೀಪ ಬೆಳಗಿಸಿ ಉದ್ಘಾಟಿಸಿದರು. ನಾರಾಯಣ ಕೇಳುತ್ತಾಯ ಅನಿಸಿಕೆ ವ್ಯಕ್ತ ಪಡಿಸಿದರು. ಶಿವಳ್ಳಿ ಮಹಿಳಾ ಘಟಕದ ಅಧ್ಯಕ್ಷೆ ಸುಮಂಗಲ ಸ್ವಾಗತಿಸಿದರು. ಬೃಂದಾವನ ಸೇವಾ ಟ್ರಸ್ಟ್ ನ ಅಧ್ಯಕ್ಷ ಶ್ರೀ ಕೃಷ್ಣ ಸೋಮಯಾಗಿ ವಂದಿಸಿದರು. ಸಂಘದ ಪದಾಧಿಕಾರಿಗಳು ಮತ್ತು ಸದಸ್ಯರು ಸಹಕರಿಸಿದರು.