ಜು.30 ಪಂಜದಲ್ಲಿ ಉಚಿತ ನೇತ್ರ ತಪಾಸಣಾ ಹಾಗೂ ಚಿಕಿತ್ಸಾ ಶಿಬಿರ

0

ಪಂಜ ಲಯನ್ಸ್ ಕ್ಲಬ್, ಪ್ರಾಥಮಿಕ ಆರೋಗ್ಯ ಕೇಂದ್ರ ಪಂಜ, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಉಡುಪಿ, ಮಂಗಳೂರು, ಸುಳ್ಯ,
ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ (ಅಂಧತ್ವ ವಿಭಾಗ ) ಉಡುಪಿ, ಮಂಗಳೂರು, ಸುಳ್ಯ, ಡಾ| ಪಿ ದಯಾನಂದ ಪೈ ಮತ್ತು ಸತೀಶ್ ಪೈ ಚಾರಿಟೇಬಲ್ ಟ್ರಸ್ಟ್ (ರಿ ) ಸೆಂಚುರಿ ಗ್ರೂಪ್ ಬೆಂಗಳೂರು ಇವರ ಜಂಟಿ ಆಶ್ರಯದಲ್ಲಿ ಉಚಿತ ನೇತ್ರ ತಪಾಸಣಾ ಹಾಗೂ ಚಿಕಿತ್ಸಾ ಶಿಬಿರವು ಜು. 30 ರಂದು ಪ್ರಾಥಮಿಕ ಆರೋಗ್ಯ ಕೇಂದ್ರ ಪಂಜದಲ್ಲಿ ನಡೆಯಲಿದೆ.

ಶಿಬಿರದಲ್ಲಿ ಕಣ್ಣಿನ ಸಂಪೂರ್ಣ ತಪಾಸಣೆ ನಡೆಸಲಾಗುವುದು. ಅಗತ್ಯವುಳ್ಳವರಿಗೆ ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆಯನ್ನು ಗೊತ್ತು ಪಡಿಸಿದ ದಿನಾಂಕದಂದು ಮಂಗಳೂರು ಪ್ರಸಾದ್ ನೇತ್ರಾಲಯದಲ್ಲಿ ಉಚಿತವಾಗಿ ಮಾಡಿಸಿ ಪಂಜಕ್ಕೆ ಕರೆದು ಕೊಂಡು ಬರಲಾಗುತ್ತದೆ.

ಅಗತ್ಯವುಳ್ಳವರಿಗೆ ಕನ್ನಡಕವನ್ನು ರಿಯಾಯಿತಿ ದರದಲ್ಲಿ ನೀಡಲಾಗುವುದು. ಎಂದು ಸಂಘಟಕರು ತಿಳಿಸಿದ್ದಾರೆ.