ಜಾಲ್ಸೂರು: ಕಂಟೈನರ್ ಲಾರಿ – ಕಾರು ಮಧ್ಯೆ ಅಪಘಾತ – ಗಾಯಾಳುಗಳು ಆಸ್ಪತ್ರೆಗೆ ದಾಖಲು

0

ಕಾರಿಗೆ ವಿರುದ್ದ ದಿಕ್ಕಿನಲ್ಲಿ ಬಂದು ಢಿಕ್ಕಿಯಾದ ಲಾರಿ

ಕಂಟೈನರ್ ಲಾರಿ ಹಾಗೂ ಕಾರಿನ ಮಧ್ಯೆ ಅಪಘಾತ ಸಂಭವಿಸಿ, ಕಾರಿನಲ್ಲಿದ್ದವರು ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಜಾಲ್ಸೂರು ಗ್ರಾಮದ ನಡುವಡ್ಕದಲ್ಲಿ ಜು.25ರಂದು ಬೆಳಿಗ್ಗೆ ಸಂಭವಿಸಿದೆ.

ಮಂಗಳೂರಿನಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಕಂಟೈನರ್ ಲಾರಿ ಜಾಲ್ಸೂರು ದಾಟಿ ನಡುವಡ್ಕಕ್ಕೆ ತಲುಪಿದ ವೇಳೆ ವಿರುದ್ದ ದಿಕ್ಕಿನಲ್ಲಿ ಸಂಚರಿಸಿ, ಸುಳ್ಯದಿಂದ ಮಂಗಳೂರಿಗೆ ತೆರಳುತ್ತಿದ್ದ ಕಾರಿಗೆ ಢಿಕ್ಕಿ ಹೊಡೆಯಿತೆನ್ನಲಾಗಿದೆ. ಪರಿಣಾಮ ಕಾರಿನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಕಲ್ಲುಗುಂಡಿಯ ಖಲೀಲ್ ಎಂಬವರ ಫ್ಯಾಮಿಲಿಯ ನಾಲ್ಕು ಮಂದಿಗೂ ಗಾಯಗಳಾಗಿದ್ದು, ಸ್ಥಳೀಯರ ನೆರವಿನಿಂದ ಸುಳ್ಯದ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು ಪ್ರಥಮ ಚಿಕಿತ್ಸೆ ಕೊಡಿಸಿ, ಕೆವಿಜಿ ಆಸ್ಪತ್ರೆಗೆ ದಾಖಲಿಸಲಿರುವುದಾಗಿ ತಿಳಿದುಬಂದಿದೆ.


ಕಂಟೈನರ್ ಲಾರಿ ಚಾಲಕನ ಅಜಾಗರೂಕತೆಯಿಂದ ಅಪಘಾತ ಸಂಭವಿಸಿದ್ದು, ಸುಳ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿರುವುದಾಗಿ ತಿಳಿದುಬಂದಿದೆ.