ಕೊಡಿಯಾಲ ಗ್ರಾಮ ಪಂಚಾಯತ್ ಗ್ರಾಮ ಸಭೆ

0

ಮೂಲಭೂತ ಸೌಕರ್ಯಗಳ ಬಗ್ಗೆ ಚರ್ಚೆ

ಕೊಡಿಯಾಲ ಗ್ರಾಮ ಪಂಚಾಯತ್ ನ 2022 – 23 ನೇ ಸಾಲಿನ ಗ್ರಾಮ ಸಭೆಯು ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರದೀಪ್ ರೈ ಅಜ್ರಂಗಳರವರ ಅಧ್ಯಕ್ಷತೆಯಲ್ಲಿ ಜು.25 ರಂದು ಕೊಡಿಯಾಲ ಸ.ಹಿ.ಪ್ರಾ.ಶಾಲೆಯಲ್ಲಿ ನಡೆಯಿತು.

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಸುಂದರಯ್ಯರವರು ನೋಡೆಲ್ ಅಧಿಕಾರಿಯಾಗಿದ್ದರು.
ಗ್ರಾಮ ಪಂಚಾಯತ್ ಪಿ.ಡಿ‌.ಒ ಜಯಂತ್ ರವರು ಸ್ವಾಗತಿಸಿದರು.

ಸಿಬ್ಬಂದಿ ಶ್ರೀಮತಿ ರಾಜೇಶ್ವರಿ ವರದಿ ಮಂಡಿಸಿದರು.

ಇಲಾಖಾಧಿಕಾರಿಗಳು ಇಲಾಖಾ ಮಾಹಿತಿ ನೀಡಿದರು.

ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಹರ್ಷನ್ ಕೆ.ಟಿ. ,ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.
ಸಿಬ್ಬಂದಿ ವರ್ಗದವರು ಸಹಕರಿಸಿದರು.