ಮೀನುಗಾರಿಕೆ ಇಲಾಖೆ ವತಿಯಿಂದ ಸಿಹಿ ನೀರು ಮುತ್ತು ಕೃಷಿ ಕುರಿತು ತರಬೇತಿ ಕಾರ್ಯಗಾರ

0

ಹೆಸರು ನೊಂದಾಯಿಸಲು ಸೂಚನೆ

ಮೀನುಗಾರಿಕೆ ಇಲಾಖೆ ವತಿಯಿಂದ ಆಗಸ್ಟ್ ಮೊದಲ ವಾರದಲ್ಲಿ ಸುಳ್ಯ ತಾಲೂಕಿನ ಐವರ್ನಾಡು ಪ್ರದೇಶದಲ್ಲಿ ಮೀನುಗಾರರಿಗೆ ಒಂದು ದಿನದ ಸಿಹಿ ನೀರು ಮುತ್ತು ಕೃಷಿ ಕುರಿತು ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಆಸಕ್ತ ಮೀನು ಕೃಷಿಕರು ಸಾರ್ವಜನಿಕರು ಕೂಡಲೇ ಪುತ್ತೂರಿನ ತಾಲೂಕು ಪಂಚಾಯತ್ ಕಾರ್ಯಾಲಯದ ಒಂದನೇ ಮಹಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ತಮ್ಮ ಹೆಸರನ್ನು ನೊಂದಾಯಿಸಬೇಕೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.