ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಕೆ ಅಮಿತ್ ಶಾ ಪುತ್ರ ಬಿ.ಸಿ.ಸಿ.ಐ ಕಾರ್ಯದರ್ಶಿ ಜಯ್ ಶಾ ಭೇಟಿ

0

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಪುತ್ರ, ಬಿ.ಸಿ.ಸಿ.ಐ ಕಾರ್ಯದರ್ಶಿ ಜಯ್ ಶಾ ಇಂದು ಭೇಟಿ ನೀಡಿ ದೇವರಿಗೆ ಪೂಜೆ ಸಲ್ಲಿಸಿದರು.

ದಂಪತಿ ಸಮೇತ ಭೇಟಿ ನೀಡಿದ ಅವರು ದೇವರ ದರ್ಶನ ಪಡೆದು, ಸಂಕಲ್ಪ ನೆರೆವೇರಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಮ್ ಸುಳ್ಳಿ , ವ್ಯವಸ್ಥಾಪನ ಸಮಿತಿ ಮಾಜಿ ಅಧ್ಯಕ್ಷರಾದ ಕೃಷ್ಣಪ್ರಸಾದ್ ಮಡ್ತಿಲ, ಸದಸ್ಯರಾದ ಪ್ರಸನ್ನ ದರ್ಬೆ, ಶೋಭಾ ಗಿರಿಧರ, ಮಾಸ್ಟರ್ ಪ್ಲಾನ್ ಸಮಿತಿ ಯ ಮನೋಜ್ ಸುಬ್ರಹ್ಮಣ್ಯ ಜತೆಗಿದ್ದರು.