ಕನ್ಯಾನ ಶಾಲಾ ಮುಖ್ಯೋಪಾಧ್ಯಾಯಿನಿ ಪ್ರಮೀಳಾರಿಗೆ ಬೀಳ್ಕೊಡುಗೆ

0

ಮಂಡೆಕೋಲು ಕನ್ಯಾನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪ್ರಮೀಳಾಯವರಿಗೆ ಜು.31 ರಂದು ಸೇವಾ ನಿವೃತ್ತಿಗೊಳ್ಳಲಿದ್ದು ಅವರಿಗೆ ಜು.30ರಂದು ಬೀಳ್ಕೊಡುಗೆ ಸಮಾರಂಭ ನಡೆಯಿತು.

ಸಮಾರಂಭದ ಅಧ್ಯಕ್ಷತೆಯನ್ನು ಎಸ್.ಡಿ.ಎಮ್.ಸಿ ಅಧ್ಯಕ್ಷ ಯೋಗೀಶ್ ಕನ್ಯಾನ ವಹಿಸಿದ್ದರು. ಉದ್ಘಾಟನೆಯನ್ನು ಮಂಡೆಕೋಲು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ವಿನುತಾ ಪಾತಿಕಲ್ಲು ನೆರವೇರಿಸಿದರು. ಮಂಡೆಕೋಲು
ಗ್ರಾ.ಪಂ. ಮಾಜಿ ಅಧ್ಯಕ್ಷ ಸುರೇಶ್ ಕಣೆಮರಡ್ಕ ಅಭಿನಂದನಾ ಮಾತನಾಡಿದರು. ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಅನಿಲ್ ತೋಟಪ್ಪಾಡಿ, ಶಾಲೆಗೆ ಸ್ಥಳ ದಾನಿಯಾಗಿರುವ ಅನಂತ ಪದ್ಮನಾಭ ಭಟ್ ಎರ್ಕಲ್ಪಾಡಿ ಕನ್ಯಾನ, ಮತ್ತು ಗ್ರಾಮ ಪಂಚಾಯತ್ ಮಾಜಿ ಸದಸ್ಯ ಶುಭಕರ ಬೊಳುಗಲ್ಲು, ಸುಳ್ಯ ತಾಲೂಕು ಶಿಕ್ಷಣ ಸಂಯೋಜಕಿ ಶ್ರೀಮತಿ ನಳಿನಿ, ಮತ್ತು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಜನಾರ್ದನ ಮಿಥಿಲ ವೇದಿಕೆಯಲ್ಲಿ ಉಪಸ್ಥಿತರಿದ್ದರು.


ಈ ಕಾರ್ಯಕ್ರಮದಲ್ಲಿ ಶಾಲೆಯಲ್ಲಿ ಶಿಕ್ಷಕ ವೃತ್ತಿ ಮಾಡಿದ ಶಿಕ್ಷಕಿಯರಿಗೆ ಮತ್ತು ಮಾಜಿ ಎಸ್.ಡಿ.ಎಮ್.ಸಿ ಅಧ್ಯಕ್ಷರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.

ಕರ್ನಾಟಕ ರಾಜ್ಯ ಪ್ರಾಥಮಿಕ ಶಿಕ್ಷಕರ ಸಂಘ ಸುಳ್ಯ ತಾಲೂಕು ಹಾಗೂ ಕನ್ಯಾನ ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರು ಸದಸ್ಯರು ಮತ್ತು ಎಸ್.ಡಿ.ಎಮ್.ಸಿ ಅಧ್ಯಕ್ಷರು ಹಾಗೂ ಸರ್ವಸದಸ್ಯರು ಮತ್ತು ಶಿಕ್ಷಕ ಶಿಕ್ಷಕಿಯರು ಸಮ್ಮುಖದಲ್ಲಿ ಶ್ರೀಮತಿ ಪ್ರಮೀಳ ಕೆ ಇವರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಸಹಶಿಕ್ಷಕಿಯಾದ ಶ್ರೀಮತಿ ಸುನಿತಾ ಸ್ವಾಗತಿಸಿದರು. ಕೃಷ್ಣಪ್ಪ ಮಾಸ್ತರ್ ಕನ್ಯಾನ ಪ್ರಾಸ್ತಾವಿಕ ಮಾತನಾಡಿದರು. ಮಂಡೆಕೋಲು ಗ್ರಂಥಾಲಯದ ಮೇಲ್ವಿಚಾರಕಿ ಶ್ರೀಮತಿ ಸಾವಿತ್ರಿ ಕಣೆಮರಡ್ಕ ಕಾರ್ಯಕ್ರಮ ನಿರೂಪಿಸಿದರು. ಪವನ್ ರಾಜ್ ವಂದಿಸಿದರು.
ಆಟೋಟ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಮಧ್ಯಾಹ್ನ ಸಾಂಸ್ಕೃತಿಕ ಕಾರ್ಯಕ್ರಮ ಬಳಿಕ “ದೇವಿ ಹೇ ಪಾವನ ಚರಿತೆ” ಯಕ್ಷಗಾನ ಬಯಲಾಟ ನಡೆಯಿತು.