ಡಾ. ಕುರುಂಜಿಯವರ 10ನೇ ಪುಣ್ಯತಿಥಿಯ ಅಂಗವಾಗಿ ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಪುಣ್ಯಸ್ಮರಣೆ

0


ಆಧುನಿಕ ಸುಳ್ಯದ ನಿರ್ಮಾತೃ ಶಿಕ್ಷಣ ಕ್ರಾಂತಿಯ ಹರಿಕಾರ ಪೂಜ್ಯ ಡಾ. ಕುರುಂಜಿ ವೆಂಕಟ್ರಮಣ ಗೌಡರ 1೦ನೇ ಪುಣ್ಯ ಸ್ಮರಣೆಯ ಕಾರ್ಯಕ್ರಮವು ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆಯಿತು.

ಕಾಲೇಜಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಡಾ. ಉಜ್ವಲ್ ಯು.ಜೆ. ಪೂಜ್ಯರ ಭಾವಚಿತ್ರದ ಮುಂದೆ ದೀಪ ಬೆಳಗಿಸಿ ಪುಷ್ಪ ನಮನ ಸಲ್ಲಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಸುರೇಶ ವಿ., ಉಪ-ಪ್ರಾಂಶುಪಾಲರಾದ ಡಾ. ಶ್ರೀಧರ ಕೆ., ಡೀನ್-ಅಕಾಡೆಮಿಕ್ ಹಾಗೂ ಮೆಕ್ಯಾನಿಕಲ್ ವಿಭಾಗದ ಮುಖ್ಯಸ್ಥರಾದ ಉಮಾಶಂಕರ ಕೆ.ಎಸ್., ಟ್ರೈನಿಂಗ್ & ಪ್ಲೇಸ್‌ಮೆ೦ಟ್ ಆಫೀಸರ್ ಡಾ. ಅನಿಲ್ ಬಿ.ವಿ., ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಕುಸುಮಾಧರ ಎಸ್., ಎಂ.ಬಿ.ಎ. ವಿಭಾಗ ಮುಖ್ಯಸ್ಥ ಪ್ರೊ. ಕೃಷ್ಣಾನಂದ ಎ, ಸಿವಿಲ್ ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥ ಡಾ. ಚಂದ್ರಶೇಖರ್ ಎ., ಕಾಲೇಜಿನ ಆಡಳಿತಾಧಿಕಾರಿ ನಾಗೇಶ್ ಕೊಚ್ಚಿ, ಕಾಲೇಜಿನ ಎನ್.ಎಸ್.ಎಸ್. ಘಟಕಾಧಿಕಾರಿಗಳಾದ ಡಾ. ಪ್ರಜ್ಞ ಎಂ.ಆರ್., ವಿದ್ಯಾರ್ಥಿ ಕ್ಷೇಮಾಧಿಕಾರಿ ಪ್ರೊಫೆಸರ್ ಪ್ರೊ. ಲೋಕೇಶ್ ಪಿ.ಸಿ. ಹಾಗೂ ಕಾಲೇಜಿನ ಎಲ್ಲಾ ಬೋಧಕ, ಬೋಧಕೇತರ ಸಿಬಂಧಿಗಳು ಭಾಗವಹಿಸಿದ್ದರು.