ಸುಳ್ಯ : ತಾಲೂಕು ಮಟ್ಟದ‌ ಬ್ಯಾಡ್ಮಿಂಟನ್ ಪಂದ್ಯಾಟ ಉದ್ಘಾಟನೆ

0

ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ, ಶಾಲಾ ಶಿಕ್ಷಣ ಇಲಾಖೆ ಹಾಗೂ ಶ್ರೀ ಶಾರದಾ ಹೆಣ್ಣು ಮಕ್ಕಳ ಪ್ರೌಢಶಾಲೆ ಸುಳ್ಯ ದ.ಕ ವತಿಯಿಂದ ನಡೆಸಲ್ಪಡುವ 2023-24 ನೇ ಸಾಲಿನ ತಾಲೂಕು ಮಟ್ಟದ‌ ಬ್ಯಾಡ್ಮಿಂಟನ್ ಪಂದ್ಯಾಟದ ಉದ್ಘಾಟನೆ ಆ. 8 ರಂದು ನಡೆಯಿತು.

ಸುಳ್ಯ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕರಾದ ಸೂಫಿ ಪೆರಾಜೆ ಉದ್ಘಾಟನೆ ನೆರವೇರಿಸಿದರು.
ದ.ಕ ಗೌಡ ವಿದ್ಯಾ ಸಂಘದ ಅಧ್ಯಕ್ಷ ಧನಂಜಯ ಅಡ್ಪಂಗಾಯ ಅಧ್ಯಕ್ಷತೆ ವಹಿಸಿದರು.

ಮುಖ್ಯ ಅತಿಥಿಗಳಾಗಿ ನಗರ ಪಂಚಾಯತ್ ಸದಸ್ಯ ಧೀರಾ ಕ್ರಾಸ್ತ, ಶ್ರೀ ಶಾರದಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಶ್ರೀಮತಿ ದಯಾಮಣಿ, ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಭಾರತಿ ಪಿ. ಉಪಸ್ಥಿತರಿದ್ದರು.

ಮುಖ್ಯ ಶಿಕ್ಷಕಿ ಶ್ರೀಮತಿ ಭಾರತಿ ಪಿ ಇವರು ಸ್ವಾಗತಿಸಿದರು.
ದೈಹಿಕ ಶಿಕ್ಷಣ ಶಿಕ್ಷಕ ಪ್ರಭಾವತಿ ವಂದಿಸಿದರು.

ಕನ್ನಡ ಶಿಕ್ಷಕ ಗಾಯತ್ರಿ ಸಿ .ಎನ್. ಕಾರ್ಯಕ್ರಮ ನಿರೂಪಿಸಿದರು.

ಸುಳ್ಯ ತಾಲೂಕಿನ ವಿವಿಧ ಪ್ರೌಢಶಾಲೆಯ ಕ್ರೀಡಾಪಟುಗಳು ಹಾಗೂ ದೈಹಿಕ ಶಿಕ್ಷಣ ಶಿಕ್ಷಕರು, ಶಿಕ್ಷಕ ವೃಂದದವರು ಸಿಬ್ಬಂದಿ ವೃಂದದವರು ಪಾಲ್ಗೊಂಡಿದ್ದರು.