ಕೊಡಿಯಾಲ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಹರ್ಷನ್ ಕೆ.ಟಿ, ಉಪಾಧ್ಯಕ್ಷೆಯಾಗಿ ಚಿತ್ರಾರವರು ಅವಿರೋಧ ಆಯ್ಕೆ

0

ಕೊಡಿಯಾಲ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಹರ್ಷನ್ ಕೆ.ಟಿ. ಹಾಗೂ ಉಪಾಧ್ಯಕ್ಷರಾಗಿ ಶ್ರೀಮತಿ‌ ಚಿತ್ರಾರವರು ಅವಿರೋಧವಾಗಿ ಆಯ್ಕೆಯಾದರು.
ಅಧ್ಯಕ್ಷ ಸ್ಥಾನಕ್ಕೆ ಒಬ್ಬರು ಹಾಗೂ ಉಪಾಧ್ಯಕ್ಷೆ ಸ್ಥಾನಕ್ಕೆ ಒಬ್ಬರು ಮಾತ್ರ ನಾಮಪತ್ರ ಸಲ್ಲಿಸಿರುವುದರಿಂದ ಅವಿರೋಧ ಆಯ್ಕೆ ನಡೆಯಿತು.

ಪೆರುವಾಜೆ ಡಾ.ಶಿವರಾಮ ಕಾರಂತ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರಾಮಚಂದ್ರ ಕೆ.ಚುನಾವಣಾಧಿಕಾರಿಯಾಗಿದ್ದು ಚುನಾವಣಾ ಪ್ರಕ್ರಿಯೆ ನಡೆಸಿಕೊಟ್ಟರು.
ಪಿಡಿಒ ಜಯಂತ್ ಸಹಕರಿಸಿದರು.
ಗ್ರಾಮ ಪಂಚಾಯತ್ ನ ಎಲ್ಲಾ ಸದಸ್ಯರು ಹಾಗೂ ಸಿಬ್ಬಂದಿ ವರ್ಗದವರು,ಗ್ರಾಮಸ್ಥರು ಉಪಸ್ಥಿತರಿದ್ದರು.