ಲಯನ್ಸ್ ಕ್ಲಬ್ ಬೆಳ್ಳಾರೆ ಜಲದುರ್ಗಾ ವತಿಯಿಂದ ಆಟಿ ಉತ್ಸವ, ಉಚಿತ ಆರೋಗ್ಯ ತಪಾಸಣೆ ಆ. 13ರಂದು ಬೆಳ್ಳಾರೆಯ ಜೆ.ಡಿ. ಆಡಿಟೋರಿಯಂ ನಲ್ಲಿ ನಡೆಯಿತು. ಕಾರ್ಯಕ್ರಮದ ಆರಂಭದಲ್ಲಿ ಕ್ಲಬ್‌ನ ಸದಸ್ಯ, ಕೆಯ್ಯೂರಿನ ಶ್ರೀದೇವಿ ಕ್ಲಿನಿಕ್ ನ ವೈದ್ಯರಾದ ಡಾ. ಶಿವಪ್ರಸಾದ್ ಆಳ್ವ ಇವರಿಂದ ಉಚಿತ ಆರೋಗ್ಯ ತಪಾಸಣೆ ನಡೆಯಿತು. ಬಳಿಕ ಕ್ಲಬ್‌ನ ಅಧ್ಯಕ್ಷ ವಿಠಲ್ ಶೆಟ್ಟಿ ಯವರ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ನಡೆಯಿತು.
















ವಿಠಲ ಶೆಟ್ಟಿಯವರು ಸ್ವಾಗತಿಸಿ ಅಧ್ಯಕ್ಷೀಯ ಮಾತುಗಳನ್ನಾಡಿದರು. ಕ್ಲಬ್‌ನ ಸದಸ್ಯೆ ಉಷಾ ಭಟ್ ಪ್ರಾರ್ಥಿಸಿ, ಧ್ವಜವಂದನೆ ಸಲ್ಲಿಸಿದರು. ಬಳಿಕ ಒಂದು ನಿಮಿಷದ ಮೌನ ಪ್ರಾರ್ಥನೆಯನ್ನು ನಡೆಸಲಾಯಿತು. ವೇದಿಕೆಯಲ್ಲಿ ಉಪಸ್ಥಿತರಿದ್ದ ಕ್ಲಬ್‌ನ ಉಪಾಧ್ಯಕ್ಷ ಕುಂಬ್ರ ದಯಾಕರ ಆಳ್ವ ಪ್ರಾಸ್ತಾವಿಕ ಮಾತುಗಳನ್ನಾಡುತ್ತಾ ಆಟಿಯ ತಿನಿಸುಗಳ ಬಗ್ಗೆ ಹೇಳಿದರು. ಪುತ್ತೂರು ಲಯನ್ಸ್ ಕ್ಲಬ್‌ನ ಮಾಜಿ ಅಧ್ಯಕ್ಷ ಆನಂದ ರೈ ಮಾಡಾವು ಆಟಿಯ ಮಹತ್ವದ ಬಗ್ಗೆ ಹೇಳಿದರು. ಕ್ಲಬ್‌ನ ಕಾರ್ಯದರ್ಶಿ ದಯಾನಂದ ವಂದಿಸಿದರು.

ಕೋಶಾಧಿಕಾರಿ ಪದ್ಮನಾಭ ಶೆಟ್ಟಿ ಪೆರುವಾಜೆ, ಸದಸ್ಯ ಡಾ. ಶಿವಪ್ರಸಾದ್ ಆಳ್ವ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸದಸ್ಯ ಪ್ರೀತಮ್ ರೈ ಪೆರುವಾಜೆ ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮದ ಬಳಿಕ ಆಟಿಯ ವಿಶೇಷ ಖಾದ್ಯಗಳ ಸಹಭೋಜನ ನಡೆಯಿತು. ಕ್ಲಬ್‌ನ ಪದಾಧಿಕಾರಿಗಳು, ಸದಸ್ಯರು, ಸದಸ್ಯರ ಕುಟುಂಬಸ್ಥರು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.









