ಸೈಂಟ್ ಜೋಸೆಫ್ ಪ್ರೌಢ ಶಾಲಾ ಬಾಲಕಿಯರ ಬ್ಯಾಡ್ಮಿಂಟನ್ ತಂಡಕ್ಕೆ ದ್ವಿತೀಯ ಪ್ರಶಸ್ತಿ

0

ಶಾಲಾ ಶಿಕ್ಷಣ ಇಲಾಖೆ ಹಾಗೂ ಶಾರದ ಪ್ರೌಢಶಾಲೆ ಸುಳ್ಯ ಇದರ ಸಂಯುಕ್ತ ಆಶ್ರಯದಲ್ಲಿ ನಡೆದ ಸುಳ್ಯ ತಾಲೂಕು ಮಟ್ಟದ ಪ್ರೌಢ ಶಾಲಾ ಬಾಲಕಿಯರ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಸುಳ್ಯದ ಸೈಂಟ್ ಜೋಸೆಫ್ ಪ್ರೌಢ ಶಾಲೆಯ ಬಾಲಕಿಯರ ತಂಡ ರನ್ನರ್ ಪ್ರಶಸ್ತಿ ಗಳಿಸಿದೆ.

ವಿದ್ಯಾ ಸಂಸ್ಥೆಯ ಸಂಚಾಲಕರಾದ ರೇ. ಫಾ ವಿಕ್ಟರ್ ಡಿ’ಸೋಜಾ ಹಾಗೂ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಬಿನೋಮ ಇವರ ಮಾರ್ಗದರ್ಶನದಲ್ಲಿ ,ದೈಹಿಕ ಶಿಕ್ಷಣ ಶಿಕ್ಷಕರಾದ ಕೊರಗಪ್ಪ ಬೆಳ್ಳಾರೆ ಹಾಗೂ ಪುಷ್ಪವೇಣಿ ತರಬೇತಿ ನೀಡಿದ್ದರು.