ರೋಟರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹದಿ ಹರೆಯದ ಸಮಸ್ಯೆ ಮತ್ತು ಪರಿಹಾರ ಕುರಿತು ಪ್ರಾತ್ಯಕ್ಷಿಕೆ ಕಾರ್ಯಕ್ರಮ

0

ರೋಟರಿ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆ, ಸುಳ್ಯ ಇಲ್ಲಿ 5 ಮತ್ತು 6ನೇ ತರಗತಿ ವಿದ್ಯಾರ್ಥಿಗಳಿಗೆ ಹದಿ ಹರೆಯದ ಸಮಸ್ಯೆ ಮತ್ತು ಪರಿಹಾರ ಕುರಿತು ಪ್ರಾತ್ಯಕ್ಷಿಕೆ ಕಾರ್ಯಕ್ರಮ ಆ. 13ರಂದು ನಡೆಯಿತು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾದ ಅರಂತೋಡು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಉಪನ್ಯಾಸಕಿ ನಂದಿನಿಯವರು ಮಕ್ಕಳಿಗೆ ಮನ ಮುಟ್ಟುವಂತೆ ತಿಳಿಯಪಡಿಸಿದರು. ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಹರಿಣಾಕ್ಷಿರವರು ಕಾರ್ಯಕ್ರಮ ಬಗ್ಗೆ ಪ್ರಸ್ತಾವನೆಗೈದು, ಸ್ವಾಗತಿಸಿದರು. ಸಹಶಿಕ್ಷಕಿ ಶ್ರೀಮತಿ ಸವಿತಾ ಎನ್. ರವರು ಧನ್ಯವಾದ ಮಾಡಿದರು. ಸಹಶಿಕ್ಷಕಿ ಶ್ರೀಮತಿ ನೀತಾಶ್ರೀ ರವರು ಕಾರ್ಯಕ್ರಮವನ್ನು ನಿರೂಪಿಸಿದರು. ಶಾಲಾ ಎಲ್ಲಾ ಶಿಕ್ಷಕ/ಶಿಕ್ಷಕೇತರ ಸಿಬ್ಬಂದಿಗಳು ಸಹಕರಿಸಿದರು.