ಜಯನಗರ ಜನ್ನತುಲ್ ಉಲೂಮ್ ಮಸ್ಜಿದ್ ಅಂಡ್ ಮದರಸದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

0

ಜಯನಗರ ಜನ್ನತುಲ್ ಉಲೂಮ್ ಮಸ್ಜಿದ್ ಅಂಡ್ ಮದರಸದಲ್ಲಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು.
ಸ್ಥಳೀಯ ಕಮಿಟಿ ಅಧ್ಯಕ್ಷ ಮಹಮ್ಮದ್ ಮುಟ್ಟತ್ತೋಡಿ ಧ್ವಜಾರೋಹಣ ನೆರವೇರಿಸಿದರು.

ಮದರಸ ಸದರ್ ಮುಅಲ್ಲಿಮ್ ಮಹಮ್ಮದ್ ತೌಫೀಕ್ ಸಕಾಫಿ ದಿನದ ಸಂದೇಶ ಭಾಷಣವನ್ನು ನೀಡಿ ಪ್ರಾರ್ಥನೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಸಮಿತಿಯ ಸದಸ್ಯರು, ಪೋಷಕ ವೃಂದದವರು, ಮದರಸಾ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಪ್ರಧಾನ ಕಾರ್ಯದರ್ಶಿ ಹಸೈನಾರ್ ಜಯನಗರ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.