ಜಾಲ್ಸೂರು ಗ್ರಾ.ಪಂ. ನಲ್ಲಿ ಸ್ವಾತಂತ್ರ್ಯ ದಿನಾಚರಣೆ

0

ಜಾಲ್ಸೂರು ಗ್ರಾಮ ಪಂಚಾಯತಿ ವಠಾರದಲ್ಲಿ 76ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆ.15ರಂದು ಆಚರಿಸಲಾಯಿತು.
ಗ್ರಾಮ ಪಂಚಾಯತಿ ಅಧ್ಯಕ್ಷ ಕೆ.ಎಂ. ಬಾಬು ಕದಿಕಡ್ಕ ಅವರು ಧ್ವಜಾರೋಹಣ ನೆರವೇರಿಸಿ, ಶುಭಹಾರೈಸಿದರು.


ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಸಿಬ್ಬಂದಿ ಚಿದಾನಂದ ಅವರು ಸರ್ಕಾರದ ಕಾರ್ಯಸೂಚಿಯ ಪ್ರತಿಜ್ಞಾವಿಧಿ ಬೋಧಿಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಕೆ.ಪಿ. ಸುಬ್ಬಯ್ಯ, ಕಾರ್ಯದರ್ಶಿ ಸುಂದರ, ಉಪಾಧ್ಯಕ್ಷೆ ಶ್ರೀಮತಿ ಲೀಲಾವತಿ ವಿನೋಬನಗರ, ನೂತನ ಅಧ್ಯಕ್ಷೆ ಶ್ರೀಮತಿ ತಿರುಮಲೇಶ್ವರಿ ಮರಸಂಕ , ಸದಸ್ಯರಾದ ಎನ್‌.ಎಂ. ಸತೀಶ್ ಕೆಮನಬಳ್ಳಿ, ಸಂದೀಪ್ ಪಿ.ಆರ್. ಕದಿಕಡ್ಕ, ಗ್ರಾ.ಪಂ. ಮಾಜಿ ಉಪಾಧ್ಯಕ್ಷ ದಿನೇಶ್ ಅಡ್ಕಾರು ಉಪಸ್ಥಿತರಿದ್ದರು. ಗ್ರಾ.ಪಂ. ಸಿಬ್ಬಂದಿಗಳು ಸಹಕರಿಸಿದರು.