ಉಬರಡ್ಕ ಶಾಲೆಯಲ್ಲಿ ಸ್ವಾತಂತ್ರೋತ್ಸವ, ಮೆರವಣಿಗೆ

0

ಉಬರಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 76 ನೇ ಸ್ವಾತಂತ್ರೋತ್ಸವ ಪ್ರಯುಕ್ತ ದ್ವಜಾರೋಹಣ ಕಾರ್ಯಕ್ರಮ ನಡೆಯಿತು. ಶಾಲಾ ಎಸ್ ಡಿ.ಎಂ.ಸಿ ಅಧ್ಯಕ್ಷ ಪುರುಷೋತ್ತಮ ಎನ್.ಆರ್ ಧ್ವಜಾರೋಹಣಗೈದರು.


ನಂತರ ಶಾಲಾ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಪೋಷಕರಿಂದ ಮೆರವಣಿಗೆ ನಡೆಯಿತು. ಮೆರವಣಿಗೆಯಲ್ಲಿ ಘೋಷಣೆಗಳನ್ನು ಕೂಗುತ್ತಾ ಪಂಚಾಯತ್ ವರೆಗೆ ಹೋಗಿ ಹಿಂತಿರುಗಿ ಶಾಲೆಯಲ್ಲಿ ಸಭಾ ಕಾರ್ಯಕ್ರಮ ನಡೆಯಿತು. ಸಭಾ ಕಾರ್ಯಕ್ರಮದಲ್ಲಿ ದತ್ತಿನಿಧಿ ವಿತರಣೆ ನಡೆಯಿತು. ಮೆರವಣಿಗೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಉಬರಡ್ಕ ಪೇಟೆಯಲ್ಲಿ ರಿಕ್ಷಾ ಚಾಲಕ ಮಾಲಕರಿಂದ ಸಿಹಿತಿಂಡಿ ವಿತರಣೆ ನಡೆಯಿತು.