ವಿನೋಬನಗರ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

0

ಜಾಲ್ಸೂರು ಗ್ರಾಮದ ವಿನೋಬನಗರದ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ 76ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆ.15ರಂದು ಆಚರಿಸಲಾಯಿತು.

ವಿದ್ಯಾಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷ ಶ್ಯಾಮ್ ಪ್ರಸಾದ್ ಅಡ್ದಂತಡ್ಕ ಅವರು ಧ್ವಜಾರೋಹಣ ನೆರವೇರಿಸಿ ಶುಭಹಾರೈಸಿದರು.
ಪ್ರೌಢ ಶಾಲಾ ಮುಖ್ಯಶಿಕ್ಷಕ ಗಿರೀಶ್ ಕುಮಾರ್ ಅವರು ಸ್ವಾತಂತ್ರ್ಯ ದಿನಾಚರಣೆಯ ಬಗ್ಗೆ ಮಾತನಾಡಿದರು.

ಈ ಸಂದರ್ಭದಲ್ಲಿ 2022-23 ನೇ ಸಾಲಿನ ಹತ್ತನೇ ತರಗತಿಯ ಎಸ್ ಎಲ್ ಸಿ ಪಬ್ಲಿಕ್ ಪರೀಕ್ಷೆಯಲ್ಲಿ 601 ಅಂಕ ಪಡೆದ ಕು.ನಿಶ್ಮಿತಾ ಅವರಿಗೆ ಶಾಲಾವತಿಯಿಂದ ಗೌರವಿಸಲಾಯಿತು. ಅವರ ತಂದೆ ಉಮೇಶ್ ಕುಕ್ಕಂದೂರು ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಗೆ ದೇಶಭಕ್ತಿ ಗೀತೆ ಸ್ಪರ್ಧೆಯನ್ನು ಏರ್ಪಡಿಸಿ ಬಹುಮಾನವನ್ನು ನೀಡಲಾಯಿತು. ಶಾಲಾಹಂತದ ಪ್ರತಿಭಾ ಕಾರಂಜಿಯ ಬಹುಮಾನವನ್ನು ವಿತರಿಸಲಾಯಿತು.

ವೇದಿಕೆಯಲ್ಲಿ ವಿದ್ಯಾಸಂಸ್ಥೆಯ ಸಂಚಾಲಕರಾದ ಸುದಾಕರ ಕಾಮತ್ , ಆಡಳಿತ ಮಂಡಳಿ ಸದಸ್ಯರಾದ ಗೋಪಾಲಕೃಷ್ಣ ಕಾಟೂರು, ಹೇಮಂತ್ ಕಾಮತ್, ಶಾಲಾಭಿವೃದ್ದಿ ಸಮಿತಿಯ ಅದ್ಯಕ್ಷೆ ಶ್ರೀಮತಿ‌ ಸೌಮ್ಯ ಕದಿಕಡ್ಕ ,ಉಪಾಧ್ಯಕ್ಷ ರವಿರಾಜ್ ಗಬ್ಬಲಡ್ಕ. ಸದಸ್ಯರಾದ ತಿಲಕ್ ರಾಜ್ ಸಾರಕೂಟೇಲು , ಮಣಿಕಂಠ ಹಾಸ್ಪರೆ, ಸ್ಕೌಟ್ ಮಾಸ್ಟರ್ ಶ್ರೀಮತಿ ಲೀಲಾವತಿ, ಗೈಡ್ ಮಾಸ್ಟರ್ ಶ್ರೀಮತಿ ಪೂರ್ಣಿಮಾ ಎಂ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ವಿದ್ಯಾಭಿಮಾನಿಗಳು, ಪೋಷಕ ವೃಂದದವರು ಉಪಸ್ಥಿತರಿದ್ದರು.
ಪ್ರಾಥಮಿಕ ಶಾಲಾ ಮುಖ್ಯೋಪಾದ್ಯಯ ಜಯಪ್ರಸಾದ್ ಕಾರಿಂಜ ಸ್ವಾಗತಿಸಿ, ಸಹಶಿಕ್ಷಕಿ ಶ್ರೀಮತಿ ಅಶ್ವಿನಿ ಪೇರಾಲು ವಂದಿಸಿ , ಸಹಶಿಕ್ಷಕಿ ಮಮತಾ ಮರ್ಕಂಜ ಕಾರ್ಯಕ್ರಮ ನಿರೂಪಿಸಿದರು.