ಗುತ್ತಿಗಾರು ಸೈಂಟ್ ಮೇರಿಸ್ ಚರ್ಚ್ ನಲ್ಲಿ ಸ್ವಾತಂತ್ರ್ಯೋತ್ಸವ ಪ್ರಯುಕ್ತ ಧ್ವಜಾರೋಹಣ

0

ಗುತ್ತಿಗಾರು ಸೈಂಟ್ ಮೇರಿಸ್ ಚರ್ಚ್‌ನಲ್ಲಿ ಸ್ವಾತಂತ್ರ್ಯೋತ್ಸವ ಪ್ರಯುಕ್ತ ಧ್ವಜಾರೋಹಣ ನಡೆಸಲಾಯಿತು. ಬೆಳಿಗ್ಗೆ ಪವಿತ್ರ ಬಲಿ ಪೂಜೆ ಹಾಗೂ ದೇಶಕ್ಕಾಗಿ ಪ್ರತ್ಯೇಕ ಪ್ರಾರ್ಥನೆ ನಡೆಸಲಾಯಿತು.

ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸಿದ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಮತ್ತು ಎಲ್ಲಾ ಸ್ವಾತಂತ್ರ್ಯ ಹೋರಾಟಗಾರರನ್ನು ಈ ಸಂದರ್ಭದಲ್ಲಿ ಸ್ಮರಿಸಲಾಯಿತು. ಧರ್ಮಗುರು ಫಾ.ಆದರ್ಶ್ ಜೋಸೆಫ್ ಸ್ವಾತಂತ್ರ ದಿನಾಚರಣೆಗೆ ಶುಭ ಕೋರಿದರು.


ಫಾ.ಜೇಮ್ಸ್ ತೋಮಸ್ ಧ್ವಜಾರೋಹಣ ನಡೆಸಿದರು. ಚರ್ಚಿನ ಸದಸ್ಯರು ಭಾಗವಹಿಸಿದರು.