ಆಲೆಟ್ಟಿ ವಾಲ್ಮೀಕಿ ಆಶ್ರಮ ಶಾಲೆಯಲ್ಲಿ 76 ನೇ ಸ್ವಾತಂತ್ರ್ಯ ದಿನಾಚರಣೆ

0

ಆಲೆಟ್ಟಿಯ ವಾಲ್ಮೀಕಿ ಆಶ್ರಮ ಶಾಲೆಯಲ್ಲಿ 76 ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು. ಧ್ವಜಾರೋಹಣ ವನ್ನು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ಉಪನಿರ್ದೇಶಕ ಧನಂಜಯ ನೆರವೇರಿಸಿದರು. ಈ ಸಂದರ್ಭದಲ್ಲಿ ಶಾಲಾ ಪೋಷಕರ ಸಂಘದ ಅಧ್ಯಕ್ಷ ಶ್ರೀಧರ ಮಾಣಿಮರ್ಧು, ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಹರ್ಷಿಯಾ, ಇಲಾಖೆಯ ಪ್ರಥಮ ದರ್ಜೆ ಸಹಾಯಕ ರಾದ ಪ್ರವೀಣ ಕುಮಾರ್, ಕಾಲೇಜು ವಿದ್ಯಾರ್ಥಿನಿಲಯದ ಮೇಲ್ವಿಚಾರಕರಾದ ವಿಠಲ ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕಿ ಹರ್ಷಿಯ ಸ್ವಾಗತಿಸಿದರು. ಶಿಕ್ಷಕಿ ಕುಮಾರಿ ಹೇಮಲತ ವಂದಿಸಿದರು. ಕಾರ್ಯಕ್ರಮದಲ್ಲಿ ಶಿಕ್ಷಕಿ ಕುಮಾರಿ ಅಕ್ಷತಾ, ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಮಮತಾ, ಮಕ್ಕಳ ಪೋಷಕರು, ಶಾಲಾ ಅಡುಗೆ ಸಿಬ್ಬಂದಿಗಳು ಭಾಗವಹಿಸಿದ್ದರು.