ಮಡಪ್ಪಾಡಿ ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

0

ಮಡಪ್ಪಾಡಿ ಗ್ರಾಮ ಪಂಚಾಯತ್ ನಲ್ಲಿ 76 ನೇ ವರ್ಷದ ಸ್ವಾತಂತ್ರ್ಯೋತ್ಸವ ದಿನಾಚರಣೆ ಆಚರಿಸಲಾಯಿತು.‌


ಸ್ವಾತಂತ್ರೋತ್ಸವದ ಪ್ರಯುಕ್ತ ಗ್ರಾಮ ಪಂಚಾಯತ್ ನಲ್ಲಿ ಬೆಳಗ್ಗೆ ಧ್ವಜರೋಹಣ ಕಾರ್ಯಕ್ರಮ ನಡೆಯಿತು. ಹಾಗೂ ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ “Meri Maati Mera Desh” (ನಮ್ಮ ನೆಲ ನಮ್ಮ ದೇಶ ” ಎಂಬ ಕಾರ್ಯಕ್ರಮವನ್ನು ಕೈಗೊಳ್ಳಲಾಗಿದ್ದು ಮತ್ತು ಮಹಾತ್ಮಾ ಗಾಂಧೀ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಪಂಚ ಅಭಿಯಾನದಡಿ “ಕೋಟಿ ವೃಕ್ಷ ಅಭಿಯಾನ ” ಆಜಾದಿ ಕಾ ಅಮೃತ ಮಹೋತ್ಸವ ಕಾರ್ಯಕ್ರಮ ನಡೆಯಿತು.

ಧ್ವಜಾರೋಹಣವನ್ನು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಿತ್ರ ದೇವ ಮಡಪ್ಪಾಡಿ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಉಷಾ ಜಯರಾಂ, ಸದಸ್ಯರು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ಪಿ.ಸಿ.ಜಯರಾಮ, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಶಾಲಾ ಮುಖ್ಯೋಪಾಧ್ಯಾಯರು, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು, ಶಾಲಾ ಎಸ್‌ಡಿಎಂಸಿ ಅಧ್ಯಕ್ಷರು, ಗ್ರಾಮ ಪಂಚಾಯತ್ ಸಿಬ್ಬಂದಿಗಳು ಅಂಗನವಾಡಿ ಕಾರ್ಯಕರ್ತೆಯರು ಆಶಾ ಕಾರ್ಯಕರ್ತೆಯರು ಎಲ್ಲಾ ಸಂಘ ಸಂಸ್ಥೆಗಳ ಸದಸ್ಯರು ಹಾಗೂ ಗ್ರಾಮಸ್ಥರು ಹಾಜರಿದ್ದರು.